ಮಹಾರಾಷ್ಟ್ರ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ವಾಕೋದ್ ಚೌಫುಲಿ ಬಳಿ ಸಂಭವಿಸಿದ ಅಪಘಾತದಲ್ಲಿ ದೊಡ್ಡ ಮಟ್ಟದ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ವೇಗವಾಗಿ ಬಂದ ಖಾಸಗಿ ಟ್ರಾವೆಲ್ಸ್ ಬಸ್ ರಸ್ತೆ ದಾಟುತ್ತಿದ್ದ ಎತ್ತುಗಾಡಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಎತ್ತುಗಾಡಿಗೆ ಹಾನಿಯಾಗಿದ್ದರೂ, ಅದೃಷ್ಟವಶಾತ್ ಗಾಡಿಯಲ್ಲಿದ್ದ ರೈತ ಅಥವಾ ಎತ್ತುಗಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಜಮಾಯಿಸಿದ ಜನರು ಅತೀ ವೇಗದ ಚಾಲನೆಯ ಬಗ್ಗೆ ಚಾಲಕನಿಗೆ ಎಚ್ಚರಿಕೆ ನೀಡಿದ್ದಾರೆ.

