Bengaluru 23°C
Ad

ಅತ್ಯಾಚಾರ ಆರೋಪ: ತೃಣಮೂಲ ಕಾಂಗ್ರೆಸ್ ನಾಯಕ ಪೊಲೀಸರ ವಶಕ್ಕೆ

ತನ್ನ ನಿವಾಸದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ತನ್ನ ನಿವಾಸದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರೇಡ್ ಯೂನಿಯನ್ ನಾಯಕರಾಗಿರುವ ಆರೋಪಿ ನಾರಾಯಣ ಮಿತ್ರನನ್ನು ಯುವತಿ ಕುಟುಂಬ ನೀಡಿರುವ ದೂರಿನ ಮೇರೆಗೆ ಬಂಧಿಸಲಾಗಿದೆ, ಮಿತ್ರ ಅವರು ಬಂಕೂರಿನ ತನ್ನ ಮನೆಯಲ್ಲಿ 2-3 ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ಮಿತ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ, ತೃಣಮೂಲ ಕಾಂಗ್ರೆಸ್ ನಾಯಕನನ್ನು ತಮ್ಮ ಟ್ರೇಡ್ ಯೂನಿಯನ್‌ನಿಂದ ಅಮಾನತುಗೊಳಿಸಿದೆ.

ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸದಾಕೆಯ ಶವ ಪತ್ತೆ ಸಮಾಜವಾದಿ ಪಕ್ಷದ ಶಾಸಕರೊಬ್ಬರ ಮನೆಯಲ್ಲಿ ಕೆಲಸದಾಕೆ ಶವವಾಗಿ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಸಕ ಜಾಹಿದ್ ಬೇಗ್ ಅವರ ಮನೆಯ ಟೆರೇಸ್‌ನಲ್ಲಿ ಸೋಮವಾರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯನ್ನು ದೃಢಪಡಿಸಿದ ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಂಡ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಬಾಲಕಿ ಇಂಥಾ ನಿರ್ಧಾರ ತೆಗೆದುಕೊಳ್ಳಲು ಕಾರಣವೇನಿರಬಹುದು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.

Ad
Ad
Nk Channel Final 21 09 2023