ಬಹ್ರೇನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಸಿಎಸ್ಎಂಐಎ) ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಆರೋಪಿ ಅಬ್ದುಲ್ ಮುಸಾವಿರ್ ನಡುಕಂಡಿಯನ್ನು ಬಂಧಿಸಲಾಗಿದೆ ಎಂದು ಸಹರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಝಿಕ್ಕೋಡ್‌ನಿಂದ ವಿಮಾನ ಹೊರಡುತ್ತಿದ್ದಂತೆ ಕೇರಳ ಮೂಲದ ಅಬ್ದುಲ್ ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

