Bengaluru 22°C
Ad

ತಾಜ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ: ಸ್ಥಳಕ್ಕೆ ದೌಡಾಯಿಸಿದ 6 ಅಗ್ನಿಶಾಮಕ ದಳ

ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್‌ಪ್ರೆಸ್‌ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ನವದೆಹಲಿ: ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್‌ಪ್ರೆಸ್‌ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ ಎಂದು ರೈಲ್ವೆ ಡಿಸಿಪಿ ತಿಳಿಸಿದ್ದಾರೆ. ತುಘಲಕಾಬಾದ್-ಓಖ್ಲಾ ನಡುವೆ ತಾಜ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಕಾಣಿಸಿಕೊಂಡ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ರೈಲ್ವೆ CPRO ಮಾಹಿತಿ ನೀಡಿದ್ದಾರೆ.

ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಪಿಸಿಆರ್ ಗೆ ಸಂಜೆ 4.41 ರ ಸುಮಾರಿಗೆ ಕರೆ ಬಂದಿತು. ತಾಜ್ ಎಕ್ಸ್ ಪ್ರೆಸ್ ರೈಲಿನ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿದೆ.

ಕೂಡಲೇ ರೈಲನ್ನು ನಿಲ್ಲಿಸಲಾಗಿದೆ. ಪ್ರಯಾಣಿಕರು ಇತರ ಬೋಗಿಗಳಿಗೆ ತೆರಳಿ ಡಿಬೋರ್ಡಿಂಗ್ ಮಾಡಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ. ಇದಲ್ಲದೆ ರೈಲ್ವೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad