Bengaluru 27°C
Ad

ಎಲ್‌ಒಸಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಎಲ್‌ಒಸಿಯನ್ನು ಕಾವಲು ಕಾಯುತ್ತಿರುವ ಸೇನಾ ಪಡೆಗಳು ಕತ್ತಲೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರರ ಚಲನವಲನ ಅರಿತು ಗುಂಡಿನ ದಾಳಿ ನಡೆಸಿದ್ದಾರೆ. ಇದು ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Ad
Ad
Nk Channel Final 21 09 2023