ಮಧ್ಯಪ್ರದೇಶ: ಕೆಲವು ವಾರಗಳಿಂದ ಕೆಲವೆಡೆ ಸುರಿಯುತ್ತಿರುವ ಭಾರಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಇದೀಗ ಉಜ್ಜಯಿನಿ ಮಹಾಕಾಳೇಶ್ವರ ದೇಗುಲದ ಗೋಡೆ ಕುಸಿತವಾಗಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭಾರೀ ಮಳೆಗೆ ಮಹಾಕಾಲ್ ದೇವಸ್ಥಾನದ ಹೊರಭಾಗದ ಗೋಡೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ಇನ್ನೂ ಇಬ್ಬರು ಗಾಯಗೊಂಡಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಜ್ಜಯಿನಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳಲ್ಲಿ ನೀರು ಸಂಗ್ರಹವಾಗಿದೆ. ಸದ್ಯ ಜಿಲ್ಲೆಯಲ್ಲಿ ಮಳೆಗೆ ಮುನ್ನಚರಿಕೆ ನೀಡಲಾಗಿದೆ.
Ad