ಸೇಡಂ: ಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗ್ರಾಮದ ಭದ್ರಸ್ವಾಮಿ (32) ಹಾಗೂ ಸದಾಶಿವ ಸ್ವಾಮಿ (10) ಎಂದು ಗುರುತಿಸಲಾಗಿದೆ. ಭದ್ರಸ್ವಾಮಿ ಹಾಗೂ ಸದಾಶಿವ ಸ್ವಾಮಿ ಶನಿವಾರ ಎಮ್ಮೆ ಮೇಯಿಸಲು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಎಮ್ಮೆಗಳು ಮನೆಗೆ ಮರಳಿದ್ದರೂ, ಈ ಇಬ್ಬರು ಮನೆಗೆ ಬಂದಿಲ್ಲ. ಬಳಿಕ ಹುಡುಕಾಟ ನಡೆಸಿದಾಗ ಕೃಷಿ ಹೊಂಡದ ಸಮೀಪ ಅವರ ಬಟ್ಟೆಗಳು ಹಾಗೂ ಮೊಬೈಲ್ ಫೋನ್ ಪತ್ತೆಯಾಗಿತ್ತು.
ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದ್ದು, ಮೃತದೇಹವನ್ನು ಹೊರ ತೆಗೆಯಲಾಗಿದೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

