Bengaluru 24°C
Ad

ಬಿಯರ್‌ ಸೇವಿಸಿ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳು ಮೃತ್ಯು

ಇಬ್ಬರು ಪೊಲೀಸ್‌ ಪೇದೆಗಳು ಬಿಯರ್‌ ಸೇವಿಸಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರೇ ಮಾಹಿತಿ ನೀಡಿದ್ದಾರೆ.

ಭೋಪಾಲ್‌: ಇಬ್ಬರು ಪೊಲೀಸ್‌ ಪೇದೆಗಳು ಬಿಯರ್‌ ಸೇವಿಸಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರೇ ಮಾಹಿತಿ ನೀಡಿದ್ದಾರೆ.

ಮೃತ ಕಾನ್‌ಸ್ಟೆಬಲ್‌ಗಳನ್ನು ದನಿರಾಮ್‌ ಉಯಿಕೆ (55) ಹಾಗೂ ಪ್ರೇಮ್‌ಲಾಲ್‌ ಕಾಕೋಡಿಯಾ (50) ಎಂಬುದಾಗಿ ಗುರುತಿಸಲಾಗಿದೆ. ಇವರು ಎಸ್‌ಎಎಫ್‌ನ 8ನೇ ಬೆಟಾಲಿಯನ್‌ ಸಿಬ್ಬಂದಿ ಆಗಿದ್ದರು. ಶನಿವಾರ ರಾತ್ರಿ ಇವರು ಬಿಯರ್‌ ಸೇವಿಸಿದ್ದು, ನಂತರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದನಿರಾಮ್‌ ಹಾಗೂ ಪ್ರೇಮ್‌ಲಾಲ್‌ ಅವರು ಆಪ್ತರಾಗಿದ್ದು, ಶನಿವಾರ ರಾತ್ರಿ ಇಬ್ಬರೂ ಬಿಯರ್‌ ಪಾರ್ಟಿ ಮಾಡಿದ್ದಾರೆ. ಇಬ್ಬರೂ ಊಟ ಮಾಡಿ ಮಲಗಿದ್ದರು. ಕೆಲ ಹೊತ್ತಿನಲ್ಲಿಯೇ ವಾಂತಿ-ಭೇದಿ ಕಾಣಿಸಿಕೊಂಡಿದೆ.

ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು, ಇಬ್ಬರ ಸಾವಿಗೆ ಏನು ಕಾರಣ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

 

Ad
Ad
Nk Channel Final 21 09 2023
Ad