Ad

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದಲ್ಲಿ  ಸೈನಿಕರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಉಗ್ರರು ಮುಂದುವರಿಸಿದ್ದು, ಅನಂತನಾಗ್‌ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯ ವೇಳೆ ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಇದಾದ ಬಳಿಕವೂ ಭದ್ರತಾ ಸಿಬ್ಬಂದಿಯು ಎನ್‌ಕೌಂಟರ್‌ ನಡೆದ ಜಾಗವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ  ಸೈನಿಕರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಉಗ್ರರು ಮುಂದುವರಿಸಿದ್ದು, ಅನಂತನಾಗ್‌ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯ ವೇಳೆ ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಇದಾದ ಬಳಿಕವೂ ಭದ್ರತಾ ಸಿಬ್ಬಂದಿಯು ಎನ್‌ಕೌಂಟರ್‌ ನಡೆದ ಜಾಗವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

Ad
Ad
Nk Channel Final 21 09 2023