ನವದೆಹಲಿ: ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ. ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಉದಯ್ ಭಾನು ಚಿಬ್ ಅವರು, ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಬಿ.ವಿ. ಶ್ರೀನಿವಾಸ್ ಅವರು ಇದುವರೆಗೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ತಿಳಿಸಿದ್ದಾರೆ.