ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ (ಆ.13) ಅಸ್ವಸ್ಥತೆ ಕಂಡು ಬಂದ ಹಿನ್ನೆಲೆಯಲ್ಲಿ ಜೆ.ಪಿ ನಡ್ಡಾ (65) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಟ್ಟಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ. ಜೆಪಿ ನಡ್ಡಾ ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವಿಭಾಗದ ನಿಗಾ ಘಟಕದಲ್ಲಿದ್ದಾರೆ.

