ನವದೆಹಲಿ: ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಜೊತೆಗಿದ್ದರು.
ಪ್ರಧಾನಿ ಮೋದಿ ಅವರೊಂದಿಗೆ ಕರ್ನಾಟಕದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ NDA ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿ ಪ್ರಧಾನಿಯವರಿಂದ ಮಾರ್ಗದರ್ಶನ ಪಡೆಯಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಭೇಟಿಯ ವೇಳೆ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಾಗಿದೆ. ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಹಕಾರ ಹಾಗೂ ಮುಂದಿನ ಕ್ರಮಗಳ ಕುರಿತು ಮಾತುಕತೆ ನಡೆದಿದೆ. ಇದೇ ವೇಳೆ ರಾಜ್ಯದಲ್ಲಿ NDA ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ಕುರಿತು ಕೂಡ ಚರ್ಚೆ ನಡೆಸಲಾಗಿದೆ.
ತಮ್ಮ ಸಚಿವಾಲಯಗಳಿಗೆ ಸಂಬಂಧಿಸಿದಂತೆ PM Narendra Modi ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಪರಿವರ್ತಕ ಕ್ರಮಗಳು ಕುರಿತು ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿಯವರಿಗೆ ವಿವರಿಸಿದ್ದಾರೆ. ವಿಶೇಷವಾಗಿ ಬೃಹತ್ ಕೈಗಾರಿಕೆಗಳು ಮತ್ತು ಉಕ್ಕು ವಲಯದಲ್ಲಿ ನಡೆಯುತ್ತಿರುವ ಪರಿವರ್ತನಾತ್ಮಕ ಕ್ರಮಗಳು ಹಾಗೂ ದೇಶದ ಕೈಗಾರಿಕಾ ಬೆಳವಣಿಗೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ ಅವರು ತೋರಿದ ಪ್ರೀತಿ ಮತ್ತು ವಿಶ್ವಾಸಕ್ಕೆ ಎಚ್.ಡಿ. ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ NDA ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಡೆದಿರುವ ಈ ಭೇಟಿ ರಾಜ್ಯ ರಾಜಕೀಯದ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿರುವುದು ಕೂಡ ಗಮನ ಸೆಳೆದಿದೆ.

