ಅಮರಾವತಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ದೇವರ ದರ್ಶನ ಪಡೆದಿದ್ದಾರೆ.

ತಿರುಪತಿಗೆ ಭೇಟಿ ನೀಡಿದ ಬಗ್ಗೆ ಮಾತನಾಡಿದ ಅವರು, ನಮ್ಮ ದೇಶದ ಜನರು ಸಂತೋಷ ಮತ್ತು ಸಮೃದ್ಧಿಯಾಗಿರಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಸ್ಫೂರ್ತಿ, ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಜೂ.15 ರಂದು ಕೇಂದ್ರ ಬೃಹತ್‌ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಕೇಂದ್ರ ಸಚಿವನಾಗಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೆಚ್‌ಡಿಕೆ ತಿಳಿಸಿದ್ದರು.