ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿದ್ದ ಮನೋಜ್ ಸೋನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮನೋಜ್ ಸೋನಿ ಅವರ ಅಧಿಕಾರ ಅವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು ಅಂದರೆ ಇನ್ನೂ ಐದು ವರ್ಷಗಳು ಇತ್ತು ಆದರೆ ವೈಯಕ್ತಿಕ ಕಾರಣಗಳಿಂದ ಅಧಿಕಾರಾವಧಿ ಮುಗಿಯುವ ಮೊದಲೇ ರಾಜೀನಾಮೆ ಕೊಟ್ಟಿದ್ದಾರೆ.
2017ರಲ್ಲಿ ಆಯೋಗದ ಸದಸ್ಯರಾಗಿ ಸೇರಿದ್ದ ಸೋನಿ ಅವರನ್ನು ಮೇ 16, 2023ರಂದು ಯುಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಆದರೆ ವೈಯಕ್ತಿಕ ಕಾರಣದಿಂದಾಗಿ ಅವಧಿಗೂ ಮೊದಲೆ ರಾಜೀನಾಮೆ ನೀಡಿದ್ದಾರೆ.

