ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರ ಮೇಲೆ  ಪರಿಚಯಸ್ಥರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ.

ಆರೋಪಿಗಳನ್ನು ಶಂಕಿ, ರಾಬಿನ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಮಹಿಳೆಯನ್ನು ಅವರನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಕೊಳವೆ ಬಾವಿ ಕಾಂಪೌಂಡ್ ಬಳಿ ಅತ್ಯಾಚಾರವೆಸಗಿದ್ದಾರೆ.

ತನ್ನ ದೂರಿನಲ್ಲಿ ಸಂತ್ರಸ್ತೆ ಪೊಲೀಸರ ಬಳಿ ಆರೋಪಿಗಳನ್ನು ತಿಳಿದಿರುವುದಾಗಿ ಹೇಳಿದ್ದು, ಶನಿವಾರ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ ರೇಪ್) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.