ಹೊಸದಿಲ್ಲಿ: ಬಹು ನಿರೀಕ್ಷಿತ ವಂದೇ ಮೆಟ್ರೋವನ್ನು ಭಾರತೀಯ ರೈಲ್ವೇ ಅಧಿಕೃತವಾಗಿ “ನಮೋ ಭಾರತ್ ರಾಪಿಡ್ ರೈಲು” ಎಂದು ಮರುನಾಮಕರಣ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದ ಮುನ್ನಾ ದಿನವಾದ ಸೋಮವಾರ (ಸೆ.16) ಗುಜರಾತ್ ನಲ್ಲಿ ದೇಶದ ಮೊದಲ ನಮೋ ಭಾರತ್ ರಾಪಿಡ್ ರೈಲು ಸೇವೆಯನ್ನು ಉದ್ಘಾಟಿಸಲಿದ್ದಾರೆ.
ನಮೋ ಭಾರತ್ ರಾಪಿಡ್ ರೈಲು ಗುಜರಾತ್ ನ ಕಚ್ ಜಿಲ್ಲೆಯಲ್ಲಿರುವ ಭುಜ್ ಪ್ರದೇಶವನ್ನು ರಾಜ್ಯದ ಅತಿದೊಡ್ಡ ನಗರಗಳಲ್ಲಿ ಒಂದಾದ ಅಹಮದಾಬಾದ್ ನೊಂದಿಗೆ ಸಂಪರ್ಕಿಸುತ್ತದೆ. ಇದು ಕೇವಲ ಆರು ಗಂಟೆಗಳಲ್ಲಿ 360 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ.
ಟಿಕೆಟ್‌ಗಳನ್ನು ಕಾಯ್ದಿರಿಸದೆ ಜನರಿಗೆ ಈ ರೈಲಿನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅದು ವಾರದ 6 ದಿನಗಳಲ್ಲಿ “ನಮೋ ಭಾರತ್ ರಾಪಿಡ್ ರೈಲುʼ ಸಂಚರಿಸಲಿದೆ ಎಂದು ಪಶ್ಚಿಮ ರೈಲ್ವೇಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ
Ad