ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಹತರಾದ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಕಬೋರ್ಡ್‌ನೊಳಗೆ ನಿರ್ಮಿಸಲಾದ ಬಂಕರ್‌ನಲ್ಲಿ ಅಡಗಿಕುಳಿತಿದ್ದರು ಎಂದು ಮಾಹಿತಿ ಸಿಕ್ಕಿದೆ.

ಎನ್‌ಕೌಂಟರ್‌ನ ನಂತರ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, ಭದ್ರತಾ ಅಧಿಕಾರಿಗಳು ಮನೆಯೊಂದರ ಬೀರುವಿನಲ್ಲಿ ಮರೆಮಾಚಲ್ಪಟ್ಟಿರುವ ಸಣ್ಣ, ಸುಸಜ್ಜಿತ, ಕಾಂಕ್ರೀಟ್ ಬಂಕರ್ ಅನ್ನು ಪರಿಶೀಲಿಸುತ್ತಿರುವುದನ್ನು ಕಾಣಬಹುದು.

ಅಡಗುತಾಣ ಪತ್ತೆಯಾದ ನಂತರ, ಅಧಿಕಾರಿಗಳು ಈ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಆರಂಭವಾದ ಅವಳಿ ಎನ್‌ಕೌಂಟರ್‌ನಲ್ಲಿ ಒಟ್ಟು ಆರು ಭಯೋತ್ಪಾದಕರು ಹತರಾಗಿದ್ದಾರೆ.

ಇನ್ನು ಮೊದರ್ಗಾಮ್ ಎನ್‌ಕೌಂಟರ್ ಸ್ಥಳದಲ್ಲಿ ಇಬ್ಬರು ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಂಡರೆ, ಭಾನುವಾರ ಚಿನ್ನಿಗಮ್ ಸ್ಥಳದಲ್ಲಿ ನಾಲ್ಕು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಡಿಐಜಿ ಸ್ವೈನ್ ಮಾತನಾಡಿ, ಇಷ್ಟೊಂದು ಸಂಖ್ಯೆಯಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಿರುವುದು ದೊಡ್ಡ ವಿಷಯ ಎಂದಿದ್ದಾರೆ.

https://x.com/i/status/1810007463111880894