ಚೆನ್ನೈ: ತಮಿಳುನಾಡಿನ ಇತ್ತೀಚಿನ ರಾಜಕೀಯ ಬದಲಾವಣೆಗಳ ಬೆನ್ನಲ್ಲೇ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ದಾಳಿ ತೀವ್ರಗೊಂಡಿದೆ. ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರದ ವಿರುದ್ಧ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಟ ವಿಜಯ್ ನೇತೃತ್ವದ ಈ ಹೊಸ ಸರ್ಕಾರವು ತನ್ನ ಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರೈಸುವುದಿಲ್ಲ ಎಂದು ಭವಿಷ್ಯ ನುಡಿದಿರುವ ಅವರು, ಪ್ರಸ್ತುತ ಆಡಳಿತವು ಡಿಎಂಕೆ ಪಕ್ಷದ ಕೃಪೆಯಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ.