ದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ, ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಮದ್ಯಪ್ರವೇಶಿಸಿ ಹಿಂದೂಗಳ ರಕ್ಷಣೆ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಶ್ವ ಹಿಂದೂ ಪರ ಸಂಘಟನೆಗಳಿಂದ ಬಿಜೆಪಿಯ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ