Bengaluru 22°C
Ad

ಸರ್ವಾಧಿಕಾರದ, ಹಣದುಬ್ಬರ ವಿರುದ್ದ ಮತಚಲಾಯಿಸಿ : ಅರವಿಂದ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ “ಸರ್ವಾಧಿಕಾರ ಮತ್ತು ಹಣದುಬ್ಬರ ವಿರುದ್ಧ ಮತ ಚಲಾಯಿಸುವಂತೆ” ಮತದಾರರನ್ನು ಶನಿವಾರ ಒತ್ತಾಯಿಸಿದ್ದಾರೆ.

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ “ಸರ್ವಾಧಿಕಾರ ಮತ್ತು ಹಣದುಬ್ಬರ ವಿರುದ್ಧ ಮತ ಚಲಾಯಿಸುವಂತೆ” ಮತದಾರರನ್ನು ಶನಿವಾರ ಒತ್ತಾಯಿಸಿದ್ದಾರೆ.

ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿವಿಲ್ ಲೈನ್ಸ್ ಪ್ರದೇಶದ ಮತಗಟ್ಟೆಯಲ್ಲಿ ಅರವಿಂದ್ ಕೇಜ್ರಿವಾಲ್, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಇತರ ಕುಟುಂಬ ಸದಸ್ಯರು ತಮ್ಮ ಮತ ಚಲಾಯಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಅವರ ತಾಯಿಗೆ ಅನಾರೋಗ್ಯದ ಕಾರಣ ಅವರು ಮತದಾನ ಮಾಡಲಾಗಲಿಲ್ಲ.

ಬೇಸಿಗೆಯ ತೀವ್ರತೆಯ ನಡುವೆಯೂ ಮತಗಟ್ಟೆಗಳಿಗೆ ತೆರಳಿ ನಿರುದ್ಯೋಗ, ಹಣದುಬ್ಬರ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಮತ ಚಲಾಯಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು. ಶುಕ್ರವಾರ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ್, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು “ಬಲಪಡಿಸುವಂತೆ” ಮತದಾರರಿಗೆ ಮನವಿ ಮಾಡಿದ್ದಾರೆ.

 

Ad
Ad
Nk Channel Final 21 09 2023
Ad