Bengaluru 30°C

ವಾಚ್‌ ಟವರ್‌ ಕುಸಿದು ಅವಘಡ: 5 ಮಂದಿ ಮೃತ್ಯು, 20 ಮಂದಿಗೆ ಗಾಯ

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಕಾರ್ಯಕ್ರಮದ ವೇದಿಕೆ ಕುಸಿದು 6 ಭಕ್ತರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ : ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಕಾರ್ಯಕ್ರಮದ ವೇದಿಕೆ ಕುಸಿದು 6 ಭಕ್ತರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.


ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು ದುರಂತ ಸಂಭವಿಸಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.


ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸಂಘಟಕರು 65 ಅಡಿ ಎತ್ತರದ ಮರದ ವೇದಿಕೆಯನ್ನು ನಿರ್ಮಿಸಿ ಅದರ ಮೇಲೆ 4-5 ಅಡಿ ಎತ್ತರದ ಆದಿನಾಥನ ಪ್ರತಿಮೆಯನ್ನು ಹಾಕಿದ್ದರು ಎಂದು ಹೇಳಲಾಗುತ್ತಿದೆ.


ಗಾಯಾಳುಗಳನ್ನು ಬರೌತ್ ಸಿಎಚ್‌ಸಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.


 

https://x.com/ANINewsUP/status/1884105574352339125?


Nk Channel Final 21 09 2023