ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಕೋಳಿಕ್ಕೋಡ್​ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭೂಕುಸಿತದಿಂದ ಹಲವು ಮನೆಗಳು, ಮರಗಳು, ಹಸು, ನಾಯಿಗಳು, ಜನರು ಸೇರಿದಂತೆ ಎಲ್ಲವೂ ಕೊಚ್ಚಿಕೊಂಡು ಹೋಗಿವೆ. ವಯನಾಡ್ ಮತ್ತು ಕೇರಳದ ಎಲ್ಲಾ ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯೊಂದಿಗೆ ಈ ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಈವರೆಗೆ 48 ಮಂದಿಯ ಮೃತದೇಹಗಳನ್ನು ಗುರುತಿಸಲಾಗಿದೆ. ಪತ್ತೆಯಾದ 96 ಮೃತದೇಹಗಳ ಮರಣೋತ್ತರ ಪರೀಕ್ಷೆ ಕೂಡ ಪೂರ್ಣಗೊಂಡಿದೆ. ಈ ಪೈಕಿ 32 ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮೆಪ್ಪಾಡಿ ಸಾಮಾಜಿಕ ಆರೋಗ್ಯ ಕೇಂದ್ರದಲ್ಲಿ ಸದ್ಯ 78 ಮೃತದೇಹಗಳಿವೆ. ನಿಲಂಬೂರ್ ಜಿಲ್ಲಾಸ್ಪತ್ರೆಯಲ್ಲಿ 32 ಮೃತ ದೇಹಗಳನ್ನು ಇಡಲಾಗಿದೆ ಎಂದು ವರದಿಯಾಗಿ