ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದು,  300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳುನಾಡಿನಿಂದ ಹಿಡಿದು ಎಲ್ಲಾ ರಾಜ್ಯಗಳಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ. 13 ವರ್ಷದ ಬಾಲಕಿಯೊಬ್ಬಳು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಬಾಲಕಿಯನ್ನು ಶ್ಲಾಘಿಸಿದ್ದಾರೆ.

ಹರಿಣಿ ಶ್ರೀ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ತನ್ನ ಉಳಿತಾಯ ಸೇರಿದಂತೆ 15 ಸಾವಿರ ರೂ.ವನ್ನು ನೀಡಿದ್ದಾರೆ. ತಮ್ಮ ಭರತನಾಟ್ಯವನ್ನು ಫೋನ್​ನಲ್ಲಿ ರೆಕಾರ್ಡ್​ ಮಾಡಿ ಮುಖ್ಯಮಂತ್ರಿಗೆ ತೋರಿಸಿದ್ದಾರೆ. ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ನಾಯಕರ ಕರೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಯನಾಡಿಗೆ ಭೇಟಿ ನೀಡಲಿದ್ದಾರೆ.

ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದರಿಂದ ಪರಿಹಾರ ಮತ್ತು ಪುನರ್ವಸತಿಗಾಗಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ವಿಜಯನ್, ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಮತ್ತು ತೀವ್ರ ವಿಪತ್ತು ಎಂದು ಘೋಷಿಸಲು ಕೇರಳ ಸರ್ಕಾರವು ಕೇಂದ್ರವನ್ನು ಕೇಳಿದೆ ಎಂದು ಹೇಳಿದರು. ದುರಂತದ ತೀವ್ರತೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ ಒಂಬತ್ತು ಸದಸ್ಯರ ಸಮಿತಿಯನ್ನು ನೇಮಿಸಿದೆ ಎಂದರು .