Ad

ಡೆಂಗ್ಯೂ ಭೀತಿ : ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸುವಂತೆ ಸೂಚನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ಮತ್ತು ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು ಇನ್ನುಮುಂದೆ ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ದೆಹಲಿ ಸಚಿವಾಲಯದಲ್ಲಿ ಸಭೆ ನಡೆಯಿತು.

ನವದೆಹಲಿ:   ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ಮತ್ತು ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು ಇನ್ನುಮುಂದೆ ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ದೆಹಲಿ ಸಚಿವಾಲಯದಲ್ಲಿ ಸಭೆ ನಡೆಯಿತು.

Ad
300x250 2

ಶನಿವಾರ ನಡೆದ ಈ ಸಭೆಯಲ್ಲಿ ಸಚಿವ ಸೌರಭ್ ಭಾರದ್ವಾಜ್ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳಿಂದ ಇದುವರೆಗೆ ನಡೆದಿರುವ ಸಿದ್ಧತೆಗಳ ಪರಿಶೀಲನೆ ನಡೆಸಿ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, GNCTD, DGHS, MCD, NDMC, DUSIB, PWD ಇಲಾಖೆ, ಶಿಕ್ಷಣ ಇಲಾಖೆ, DSIIDC ನ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad