Bengaluru 16°C

ಪತಿ ಬೈದಿದ್ದಕ್ಕೆ ಮೂರನೇ ಮಹಡಿಯಿಂದ ಜಿಗಿದು ಪತ್ನಿ ಆತ್ಮಹತ್ಯೆ

ಪತಿ ಮತ್ತು ಪತ್ನಿಯ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಅದು ತಾರಕಕ್ಕೇರಿದೆ. ಈ ವೇಳೆ ಪತ್ನಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ವಿಡಯೋ ಎಲ್ಲೆಡೆ ವೈರಲ್‌ ಆಗಿದೆ.

ಇಂದೋರ್: ಪತಿ ಮತ್ತು ಪತ್ನಿಯ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಅದು ತಾರಕಕ್ಕೇರಿದೆ. ಈ ವೇಳೆ ಪತ್ನಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ವಿಡಯೋ ಎಲ್ಲೆಡೆ ವೈರಲ್‌ ಆಗಿದೆ.


ನೊಂದ 27 ವರ್ಷದ ಮಹಿಳೆ ತಾನು ವಾಸವಿದ್ದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಇಂದೋರ್‌ನ ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರ್ ಟೌನ್‍ಶಿಪ್‌ನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.


ಮೃತರನ್ನು ಇಡಬ್ಲ್ಯೂಎಸ್ ಕ್ವಾರ್ಟರ್ಸ್ ನಿವಾಸಿ ಅಂಗೂರಿ ಬಾಯಿ ಎಂದು ಗುರುತಿಸಲಾಗಿದೆ. ಪತಿ ಆಕೆಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಹಾಗಾಗಿ ಅವಳು ಕಟ್ಟಡದ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಮಹಿಳೆ ಸಾಗರ ಮೂಲದವಳು. ಆಕೆಯ ಪತಿ ರಾಹುಲ್ ಲೋಧಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Nk Channel Final 21 09 2023