ಥಾಣೆ: ಕುಟುಂಬ ಕಲಹ ತಾರಕಕ್ಕೇರಿ ರಸ್ತೆಯಲ್ಲಿಯೇ ದುಬಾರಿ SUV ಕಾರಿನ ಮೂಲಕ ಪರಸ್ಪರ ಗುದ್ದಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಎಸ್ ಯುವಿ ಚಾಲಕನೊಬ್ಬ ಉದ್ದೇಶಪೂರ್ವಕವಾಗಿ ತನ್ನ ವಾಹನವನ್ನು ಮತ್ತೊಂದು ಕಾರಿಗೆ ಎರಡು ಬಾರಿ ಡಿಕ್ಕಿ ಹೊಡೆದಿದ್ದರಿಂದ ಕನಿಷ್ಠ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನನಿಬಿಡ ರಸ್ತೆಯಲ್ಲಿ ಕಪ್ಪು ಬಣ್ಣದ ಎಸ್ಯುವಿ ಪದೇ ಪದೇ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಕಪ್ಪು ಬಣ್ಣದ ಎಸ್ಯುವಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತನ್ನ ಪತ್ನಿಯೊಂದಿಗೆ ಜಗಳವಾಡಿದ್ದ, ನಂತರ ಕುಟುಂಬ ಸದಸ್ಯರು ಮಧ್ಯ ಪ್ರವೇಶಿಸಿ ಮಹಿಳೆ ಹಾಗೂ ಮಗುವನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ನಿರ್ಧರಿಸಿದರು.ಇದರಿಂದ ಕೋಪಗೊಂಡ ವ್ಯಕ್ತಿ ತನ್ನ ಕಾರನ್ನು ಪತ್ನಿ ಹಾಗೂ ಮಗು ಕುಳಿತಿದ್ದ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ.
ಘಟನೆಯ ಪರಿಣಾಮವಾಗಿ ರಸ್ತೆಯಲ್ಲಿ ನಿಂತಿದ್ದ ಇಬ್ಬರು ವ್ಯಕ್ತಿಗಳು ಮತ್ತು ಬೈಕ್ ಸವಾರರನ್ನೂ ಕಪ್ಪು ಬಣ್ಣದ ಎಸ್‌ಯುವಿ ಡಿಕ್ಕಿ ಹೊಡೆದು ಹಲವಾರು ಮೀಟರ್ ಎಳೆದಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಇನ್ನೂ ಬಂಧಿಸಬೇಕಿದೆ.
Horrific Road Rage incident, at #Ambernath–#Badlapur road in #Thane dist, on Aug 20.
A car rams another car with a child, women inside and dragged a man after hitting him and takes U-turn, rammed into the car again.#RoadSafety #ThaneHorror #RoadRage #Maharashtra… pic.twitter.com/6ezgRdODqE
— Surya Reddy (@jsuryareddy) August 20, 2024

