ಮುಂಬೈ : ವಿಮಾನ ನಿಲ್ದಾಣದ ಏರ್ ಇಂಡಿಯಾ ಎಕ್ಸ್ಪ್ರೆಸ್ ಕೌಂಟರ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ವರದಿಗಳ ಪ್ರಕಾರ, ಈ ಘಟನೆ ಭಾನುವಾರ ನಡೆದಿದ್ದು, ನಂತರ ಪ್ರಯಾಣಿಕನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಇದಾದ ನಂತರ ಭದ್ರತಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 1 ರಂದು, ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಏರ್ ಇಂಡಿಯಾ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ. ಡ್ಯೂಟಿ ಮ್ಯಾನೇಜರ್ ಕೂಡಲೇ ಸಿಐಎಸ್‌ಎಫ್‌ಗೆ ಸೂಚಿಸಿದರು ಮತ್ತು ಪ್ರಯಾಣಿಕರನ್ನು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ ಪ್ರಕಾರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಬೋರ್ಡಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಸ್ವಲ್ಪ ಸಮಯ ಕಾಯುವಂತೆ ಕೇಳಿದ್ದಕ್ಕೆ ಆಕ್ರೋಶಗೊಂಡ ಮಹಿಳೆ ನಿಂದಿಸಲು ಶುರು ಮಾಡಿದ್ದರು.

