ಕೋಲ್ಕತ್ತಾ: ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ವಿರುದ್ಧ ಇಡೀ ದೇಶವೆ ವೈದ್ಯೆ ಪರ ಹೋರಾಡುತ್ತಿದೆ. ಈ ಮದ್ಯೆ ಅದೇ ಪ್ರತಿಭಟನೆ ವೇಳೆ ಮತ್ತೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. . ಪ್ರತಿಭಟನಾ ನಿರತ ಮಹಿಳೆ ಬಳಿ ಖಾಸಗಿ ಅಂಗಗಳನ್ನು ತೋರಿಸಿ ವಕೃತವಾಗಿ ವರ್ತಿಸಿದ್ದಾನೆ .ಎಸ್ಪ್ಲೇನೇಡ್ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ.
ಕೆಲವು ಪ್ರತಿಭಟನಾಕಾರರು ಆ ವ್ಯಕ್ತಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಸಮೀಪದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕರೆ ಮಾಡಿದರು. ಸುತ್ತಮುತ್ತ ಇದ್ದ ಪೊಲೀಸರು ಆ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥ ಎಂದು ಗುರುತಿಸಿ ಅಲ್ಲಿಂದ ತೆರಳಲು ಅವಕಾಶ ಮಾಡಿಕೊಟ್ಟರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿ ಆರೋಪಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಮಹಿಳೆಯ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

