ಭೋಪಾಲ್: ಮಧ್ಯಪ್ರದೇಶದ ಇಂದೋರ್ನಲ್ಲಿ ಭಾನುವಾರ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಮರಗಳನ್ನು ನೆಟ್ಟು ಹೊಸ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ. ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು, ನಂತರ ರಾಜ್ಯದ ಮುಖ್ಯಮಂತ್ರಿ ಮೋಹನ್ ಯಾದವ್ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ತಂಡದಿಂದ ಪ್ರಮಾಣಪತ್ರವನ್ನು ಪಡೆದರು.
ಇಂದೋರ್ ಈಗ ವಿಶ್ವದ ನಂಬರ್ ಒನ್ ಸ್ಥಾನದಲ್ಲಿದೆ. ಸ್ವಚ್ಛತೆ ವಿಚಾರದಲ್ಲಿ ಮಾದರಿಯಾದ ಇಲ್ಲಿನ ಜನತೆ ಇನ್ನೊಂದು ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇದಕ್ಕೆ ಕಾರಣಕರ್ತರಾದ ಇಂದೋರ್‌ನ ನನ್ನ ಸಹೋದರ- ಸಹೋದರಿಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ.
https://x.com/DrMohanYadav51/status/1812492242994556941

