Showing 20 of 2480 posts • Page 101 of 124
ಸಿವಾನ್ ಜಿಲ್ಲೆಯೊಂದರಲ್ಲಿಯೇ ಎರಡು ಸೇತುವೆಗಳು ಬುಧವಾರ ಸುಮಾರು 35 ವರ್ಷಗಳಷ್ಟು ಹಳೆಯದಾದ ಸೇತುವೆಗಳು ಕುಸಿದಿವೆ. ದಿಯೋರಿಯಾ ಬ್ಲಾಕ್ನಲ್ಲಿ ಸೇತುವೆಗಳು ಕುಸಿದಿದ್ದು, ಯಾವುದೇ ಪ್ರಾಣಾಪಾಯ, ಜನರಿಗೆ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ.
ಹೊಸ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಹತ್ರಾಸ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರದ ಮೊತ್ತದಲ್ಲಿ ಹೆಚ್ಚಳ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಗರ್ಭಿಣಿಯರಿಗೆ ಸೋಂಕಿನ ತಪಾಸಣೆ
10 ವರ್ಷಗಳು ನಮ್ಮ ಅಧಿಕಾರದ ಮೂರನೇ ಒಂದು ಭಾಗ ಮಾತ್ರ. ಎನ್ಡಿಎಗೆ ಇನ್ನೂ 20 ವರ್ಷ ಆಡಳಿತ ನಡೆಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ರಾಜ್ಯಸಭೆಯ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ವಿಷಪೂರಿತ ಆಹಾರ ಸೇವಿಸಿ ಐದು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಅಸ್ವಸ್ಥರಾಗಿದ್ದಾರೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಮಧ್ಯಪ್ರದೇಶದ ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ನಡೆದಿದೆ.
ರಾಜ್ಯಸಭಾ ಸದಸ್ಯರಾಗಿ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡಿರುವ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿಯವರು ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದರು.
ಜನವರಿ 20ರಂದು ಅಯೋಧ್ಯ ರಾಮಮಂದಿರ ಉದ್ಘಾಟನೆ ಗೊಂಡಿತ್ತು. ಇಂದಿಗೆ ಸುಮಾರು 6 ತಿಂಗಳು ಕಳೆದಿವೆ. ಪ್ರತಿದಿನ ರಾಮನ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಬರುತ್ತಾರೆ.ಈಗ ರಾಮಮಂದಿರ ಟ್ರಸ್ಟ್ ರಾಮನ
ಹಿಜಾಬ್ ನಿಷೇಧದ ಬೆನ್ನಲ್ಲೆ ಮುಂಬೈನ ಕಾಲೇಜೊಂದು ಹರಿದ ಜೀನ್ಸ್, ಟೀ ಶರ್ಟ್ ಮತ್ತು ರಿವಿಲಿಂಗ್ ಡ್ರೆಸ್ಗಳನ್ನು ಬ್ಯಾನ್ ಮಾಡಿದೆ.
ಛತ್ತೀಸಗಢ ನಾರಯಣಪುರ ಜಿಲ್ಲೆಯ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ. ಅಬುಜ್ಮದ್ನ ಕೊಹ್ಕಮೇಟಾ ಪೊಲೀಸ್ ಠಾಣೆಯ ವ್ಯಾಪ್ತಿಯ
ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ನರೇಂದ್ರ ಮೋದಿ, ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ವೇಳೆ ನರೇಂದ್ರ ಮೋದಿ ಅವರನ್ನು ಪ್ರತಿಪಕ್ಷದ
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಇಂದು ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್
ಉತ್ತರ ಪ್ರದೇಶದ ಹಾಥ್ರಸ್ನಲ್ಲಿ ಭೀಕರ ದುರಂತ ಸಂಭವಿಸಿದ್ದು ಧಾರ್ಮಿಕ ಸಭೆಯೊಂದರ ವೇಳೆ ಕಾಲ್ತುಳಿತ ಸಂಭವಿಸಿ 107 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.
ಉತ್ತರಪ್ರದೇಶದಲ್ಲಿ ಕಂಡು ಕೇಳರಿಯದಂತಹ ದುರಂತವೊಂದು ಸಂಭವಿಸಿದೆ. ಶಿವನ ಆರಾಧನೆ ಮಾಡಿ ವಾಪಸ್ ಆಗುತ್ತಿದ್ದವರ ಮೇಲೆ ಏಕಾಏಕಿ ಜವರಾಯನ ದರ್ಶನವಾಗಿ ಬಿಟ್ಟಿದೆ.
ಹಾಥರಸ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 107 ಮಂದಿ ಸಾವಿಗೀಡಾಗಿದ್ದಾರೆ. ಈ ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
3ನೇ ಬಾರಿಗೆ ಪ್ರಧಾನಮಂತ್ರಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ಲೋಕಸಭಾ ಅಧಿವೇಶನದಲ್ಲಿ ಭಾಷಣ ಮಾಡಿದ್ದಾರೆ. ಅಧಿವೇಶನದಲ್ಲಿ ರಾಹುಲ್ ಗಾಂಧಿಯನ್ನು ಮಗು ಎಂದು ಕರೆದಿದ್ದಾರೆ.
‘ಉತ್ತರ ಪ್ರದೇಶದಲ್ಲಿ ನಾವು ಎಲ್ಲಾ 80 ಕ್ಷೇತ್ರಗಳನ್ನು ಗೆದ್ದಿದ್ದರೂ ಇವಿಎಂ ಅನ್ನು ನಾನು ನಂಬುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ತಿಭಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸತ್ಸಂಗದ ಸಮಯದಲ್ಲಿ ಹಠಾತ್ ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ 23 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಚೊಚ್ಚಲ ಭಾಷಣದ ಕೆಲ ಭಾಗಗಳನ್ನು ಲೋಕಸಭೆಯ ಕಡತದಿಂದ ತೆಗೆದು ಹಾಕಿರುವ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.