Showing 20 of 2480 posts • Page 103 of 124
ವಾರದ ಹಿಂದೆಷ್ಟೇ ದೆಹಲಿಯ ಜನತೆ ಹನಿ ನೀರಿಗೂ ಪರದಾಡುತ್ತಿದ್ದರು. ಆದರೆ ಈಗ ರಾಷ್ಟ್ರರಾಜಧಾನಿಯೇ ನೀರಲ್ಲಿ ಮುಳುಗುವಷ್ಟು ದಾಖಲೆಯ ವರ್ಷಧಾರೆಯಾಗಿದ್ದು. ದೆಹಲಿ ರಸ್ತೆಗಳು, ತಗ್ಗು ಪ್ರದೇಶದ ಮನೆಗಳು ಸಂಪೂರ್ಣ ಜಲಮಯವಾಗಿವೆ.
ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ.
ದೇಶದ ರಾಜಧಾನಿ ದೆಹಲಿಯಲ್ಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿದ ನಂತರ, ಇದೀಗ ರಾಜ್ಕೋಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಪಘಾತವನ್ನು ತಪ್ಪಿಸಲಾಗಿದೆ.
ನಗರದ ಒಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಸಜೀವ ದಹನ ಹೊಂದಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಘಟನೆ ತಮಿಳುನಾಡಿನ ವಿರುದುನಗರದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶನಿವಾರ ಜಾರ್ಖಂಡ್ನ ಹಜಾರಿಬಾಗ್ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಲೇಹ್ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಎಲ್ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ.
ಭಾರೀ ಮಳೆಯಿಂದಾಗಿ ಅಯೋಧ್ಯೆಯ 14 ಕಿ.ಮೀ. ಉದ್ದದ ರಾಮ ಪಥ ಹಾನಿಗೊಳಗಾಗಿದೆ. ಅಲ್ಲದೆ ಒಳಚರಂಡಿ ನಿರ್ಮಾಣ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ.
ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, 5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪವಿತ್ರ ಅಮರನಾಥ ಯಾತ್ರೆಗೆ ಇಂದು ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ.
ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಕುಲದೀಪ್ ಜುಗುನಿಯಾ ದೀಹ್ನ ಸರ್ಕಾರಿ ಪಾಲಿಟೆಕ್ನಿಕ್ನಿಂದ ಕೆಮಿಕಲ್
1989ರ ಐಎಫ್ಎಸ್ ಬ್ಯಾಚ್ ಅಧಿಕಾರಿ, ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ತಜ್ಞ ಎಂದೇ ಖ್ಯಾತರಾಗಿರುವ ವಿಕ್ರಮ್ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ನೀಟ್ ಪರೀಕ್ಷಾ ಅಕ್ರಮದ ವಿಚಾರವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ತನಿಖೆ ಪೂರ್ಣಗೊಳಿಸುವ ಹೊಣೆ ಕೇಂದ್ರ ಸರ್ಕಾರದ ಮೇಲಿದೆ. ಸರ್ಕಾರ ವರದಿ ಪಡೆಯಲಿ ಎಂದು ಶಿಕ್ಷಣ ಸಚಿವರು ತಿಳಿಸಿದರು.
ಕಾಂಗ್ರೆಸ್ ಸಂಸದೆ ಫುಲೋ ದೇವಿ ನೇತಮ್ ಅವರು ಇಂದು (ಶುಕ್ರವಾರ) ಸಂಸತ್ತಿನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಮೂರ್ಛೆ ಹೋಗಿದ್ದಾರೆ. ಮೂರ್ಛೆ ಹೋಗಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲ್ಛಾವಣಿ ಕುಸಿತಕ್ಕೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕಾಂಗ್ರೆಸ್ ಆರೋಪಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ತತ್ತರಿಸಿ ಹೋಗಿದ್ದು, ಹಲವೆಡೆ ಜಲಾವೃತಗೊಂಡಿದ್ದು, ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ
ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್-1 ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. 6 ಮಂದಿಗೆ ಗಾಯಗಳಾಗಿವೆ.
ಹಾವೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್ ಸೊರೆನ್ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿ ಗಾಯಗೊಂಡ ಘಟನೆ ಇಂದು ಮುಂಜಾನೆ 5.30ಕ್ಕೆ ನಡೆದಿದೆ.
18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.