Showing 20 of 2480 posts • Page 107 of 124
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಉಷ್ಣ ಮಾರುತ ತನ್ನ ಆರ್ಭಟ ಮುಂದುವರಿಸಿದ್ದು, ಇದರ ಪರಿಣಾಮವಾಗಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 22 ಜನರು ಉಷ್ಣ ಸಂಬಂಧಿ ವ್ಯಾಧಿಗಳಿಂದ ಸಾವನ್ನಪ್ಪಿದ್ದಾರೆ.
ತೆಲಂಗಾಣದ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿಮ್ಲಾದಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆ ಸೇರಿದ್ದಾರೆ.
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಲಿ ಎಂದರು.
ಕುಡಿಯುವ ನೀರನ್ನು ಪೂರೈಕೆ ಮಾಡಲು ಬಂದಿದ್ದ ವಾಹನ ಟ್ಯಾಂಕ್ ಒಳಗೆ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಫುರ್ಸುಂಗಿ ಪ್ರದೇಶದಲ್ಲಿ ನಡೆದಿದೆ.
ನೀಟ್ ಹಾಗೂ ನೆಟ್ ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ ನೀಡಿ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ.
ಇಂದು ಅಂತಾರಾಷ್ಟ್ರೀಯ ಯೋಗ ದಿನ. ಭಾರತ ಸೇರಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಇಂದು ಅಂತಾರಾಷ್ಟ್ರೀಯ ಯೋಗ ದಿನ: ಜಗತ್ತಿನಾದ್ಯಂತ ಆಚರಣೆ
ಒಡಿಶಾದ ಬಿಜೆಪಿಯ ಪ್ರಮುಖ ನಾಯಕ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ಬಿಹಾರದ ನಳಂದದ ತೆಲ್ಹಾರ ಪ್ರೌಢಶಾಲೆಯ ಹಂಗಾಮಿ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಮೇಲೆ ಶಾಲೆಯ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ನಡೆದಿದೆ.
ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಮೂವರು ಅಭ್ಯರ್ಥಿಗಳಾಗಿದ್ದು, ಓರ್ವ ದಾನಪುರದ ಪುರಸಭೆಯ ಜೂನಿಯರ್ ಇಂಜಿನೀಯರ್ ಎಂದು ವರದಿಯಾಗಿದೆ.
ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ 50ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ಇಂದು ತಳ್ಳಿ ಹಾಕಿದೆ.
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಒಂದಲ್ಲ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮಾಫಿಯ, ಅಕ್ರಮ ಮಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಮಂಗಳವಾರ ಭೇಟಿ ನೀಡಿದ ವೇಳೆ ಅವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ.
ಅವಳಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಹರ್ಯಾಣದ ಬಹುದ್ದೂರ್ಗಢದ ಡಾಬಾದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ನೀಟ್ ಅಭ್ಯರ್ಥಿ ಅನುರಾಗ್ ಯಾದವ್, ತನಗೆ ಒದಗಿಸಲಾದ ಹಾಗು ಸೋರಿಕೆಯಾದ ಪ್ರಶ್ನೆ ಪತ್ರಿಕೆ ನಿಜವಾದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂದು ಒಪ್ಪಿಕೊಂಡಿದ್ದಾನೆ.
ನಕಲಿ ಪಾಸ್ಪೋರ್ಟ್ ಪ್ರಕರಣದಡಿಯಲ್ಲಿ ಯುವಕನೊಬ್ಬ ಜೈಲುಪಾಲಾಗಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು 66ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
ಮಹಿಳಾ ಕಾನ್ಸ್ಟೆಬಲ್ ಮೇಲೆ ಪೊಲೀಸರೇ ಅತ್ಯಾಚಾರವೆಸಗಿರುವ ಘಟನೆ ಭೂಪಾಲಪಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರವೆಸಗಿದ ಪೊಲೀಸರನ್ನು ಸೇವೆಯಿಂದ ತೆಗೆದುಹಾಕಲಾಗಿದೆ.
ಮುಂಬೈನ 60ಕ್ಕೂ ಹೆಚ್ಚು ಸಂಸ್ಥೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ- ಮೇಲ್ ಕಳುಹಿಸಿದ್ದ ಆರೋಪದಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.