Showing 20 of 2480 posts • Page 108 of 124
ರಾಮಾಯಣ ನಾಟಕ ಪ್ರದರ್ಶಿಸಿದ 8 ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ 1.02 ಲಕ್ಷ ರೂ. ದಂಡ ವಿಧಿಸಿದೆ. ಈ ನಾಟಕವು ನಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಲಾಗಿದೆ.
ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ.
ಕಳ್ಳ ಬಟ್ಟಿ ಪ್ಯಾಕೆಟ್ ಸಾರಾಯಿ ಸೇವಿಸಿ 13 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ.
ಒಡಿಶಾದಲ್ಲಿ ಐದು ಅವಧಿಯ ಮುಖ್ಯಮಂತ್ರಿ ಆಗಿದ್ದ, ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಒಡಿಶಾ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಬಾರಿಯ ಬಿಸಿಲು ದೇಶದಾದ್ಯಂತ ಜನರನ್ನು ಕಂಗಾಲಾಗಿಸಿಬಿಟ್ಟಿದೆ. ಕೆಲವೆಡೆ ವರುಣ ಆಗಮನದಿಂದ ಧರೆಗೆ ತಂಪೆರೆದಿದ್ದಾನೆ ಆದರೆ ಇನ್ನೂ ಕೆಲವೆಡೆ ಮಳೆ ಸುಳಿವು ಕಂಡಿಲ್ಲ
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದ ಆವರಣದಲ್ಲಿ ಸಿಡಿದ ಗುಂಡಿಗೆ ಯೋಧ ಸಾವನಪ್ಪಿದ್ದಾರೆ. . ರಾಮಮಂದಿರ ಆವರಣದಲ್ಲಿ ಭದ್ರತೆಗಾಗಿ ನಿಯೋಜಿಸಿದ್ದ
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕರಿಗೆ ಸಹಕಾರ ನೀಡಿದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ರಜೌರಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಹಿಂದು ಯಾತ್ರಿಕರು, ನಾಗರಿಕರು ಹಾಗೂ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವುದಕ್ಕೆ ತಕ್ಕ ತಿರುಗೇಟು ನೀಡಬೇಕು.
ದಿಲ್ಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಜುಲೈ 3ರವರೆಗೆ ದೆಹಲಿ ಕೋರ್ಟ್ ವಿಸ್ತರಿಸಿದೆ.
ತೆಲುಗು ಪ್ರಸಿದ್ದ ನಟ ಪವನ್ ಕಲ್ಯಾಣ್ ಇಂದು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಅಧಿಕಾರ ಸ್ವೀಕರಿಸಿರುವ ಕೆಲವು ಫೋಟೋಗಳು ಇದೀಗ ವೈರಲ್ ಆಗಿವೆ.
ಯೋಗ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಜೂ.20 ಹಾಗೂ 21ರಂದು ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬಿಹಾರದ ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ಇಂದು ಉದ್ಘಾಟಿಸಿದರು. ಪ್ರಧಾನಿ ಮೊದಲು ಹೊಸ ಶಿಬಿರಗಳಲ್ಲಿ ಫಲಕವನ್ನು ಅನಾವರಣಗೊಳಿಸಿದರು
ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.30ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು.
ಅಯೋಧ್ಯೆಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ 5.25ಕ್ಕೆ ನಡೆದಿದೆ.
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಘಟನೆ ಬಿಹಾರದಲ್ಲಿ ನಡೆದಿದೆ.
ಕಾಂಗ್ರೆಸ್ ನಾಯಕಿ ಹಾಗೂ ಶಾಸಕಿ ಕಿರಣ್ ಚೌಧರಿ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಅವರೊಂದಿಗೆ ಅವರ ಪುತ್ರಿಯಾಗಿರುವ ಮಾಜಿ ಸಂಸದೆ ಶ್ರುತಿ ಚೌಧರಿ ಕೂಡ ಬಿಜೆಪಿ ಸೇರಲಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ತಲಸ್ಸೇರಿ ಬಳಿಯ ಜಮೀನಿನಲ್ಲಿ ಬಾಂಬ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಒಟ್ಟು 9.26 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ.
ಪ್ರಧಾನಿ ಮೋದಿ ಇಂದು ಉತ್ತರ ಪ್ರದೇಶ, ಬಿಹಾರ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು 9.26 ಕೋಟಿ ರೈತರಿಗೆ 17ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಿದ್ದಾರೆ.