Showing 20 of 2478 posts • Page 110 of 124
ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯ ಪ್ರದೇಶ ನಾಯಕತ್ವ ಪ್ರಶಸ್ತಿ-2024 ಲಭಿಸಿದೆ.
ಕೋಲ್ಕತ್ತಾದ ಮಾಲ್ನಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮಂದಿ ಒಳಗಡೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಆಕ್ರೊ ಪೊಲಿಸ್ ಮಾಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ರಾಜೀನಾಮೆ ನೀಡಿರುವ ಘಟನೆ ಸಿಕ್ಕಿಂ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಮೋದಿ ಅವರು ಪರಿಶೀಲನಾ ಸಭೆ ನಡೆಸಿದ ಕಲವೇ ಗಂಟೆಗಳಲ್ಲಿ ರಿಯಾಸಿ ಬಸ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೊಲೀಸರು 50 ಮಂದಿ ಸ್ಥಳೀಯರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಇಟಲಿಯ ಅಪುಲಿಯಾ ಪ್ರದೇಶದ ಬೃಂಡಿಸಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರೆ, ನಾಲ್ವರು ಸೈನಿಕರು ಗಾಯಗೊಂಡಿರುವ ಘಟನೆ ರಾಜೌರಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಭಾರೀ ಮಳೆಯು ಸಿಕ್ಕಿಂನಲ್ಲಿ ವ್ಯಾಪಕವಾದ ವಿನಾಶವನ್ನು ಉಂಟುಮಾಡಿದೆ. ಹಲವೆಡೆ ಭೂಕುಸಿತದಿಂದಾಗಿ ಉತ್ತರ ಸಿಕ್ಕಿಂ ರಾಜ್ಯದ ಸಂಪರ್ಕ ಕಡಿತವಾಗಿದೆ. ಇದರಿಂದ ತೀಸ್ತಾ ನದಿಯು ಉಕ್ಕಿ ಹರಿಯುತ್ತಿದೆ
ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಅಜಿತ್ ದೋವಲ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ. ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿದೆ.
ಮಹಾರಾಷ್ಟ್ರದನಾಗ್ಪುರದಲ್ಲಿರುವ ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟಕ ಸಿಡಿದು 5 ಮಂದಿ ಕಾರ್ಮಿಕರು ಸಾವನಪ್ಪಿದ್ದು 5 ಮಂದಿ ಗಾಯಗೊಂಡಿದ್ದಾರೆ
ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ವಾರಗಳ ನಂತರ ಪೆಮಾ ಖಂಡು ಇಂದು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕೇರಳದ ಮೂಲದ ನಾಗರಿಕರ ಕುಟುಂಬಗಳಿಗೆ ತಲಾ ₹5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಇಲ್ಲಿನ (ಕೇರಳ) ಸರ್ಕಾರ ಇಂದು ಹೇಳಿದೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್ನಿಂದ ಅಯೋಧ್ಯೆ
ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾದ ನಂತರ ಪೆಮಾ ಖಂಡು ಅವರು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ
2000ನೇ ಇಸವಿಯ ಡಿಸೆಂಬರ್ 22ರ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ದಾಳಿ ನಡೆಸಿದ ಉಗ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಾಕಿಸ್ತಾನ ಮೂಲದ ಉಗ್ರ ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಪಾಕ್ಗೆ ಮರಣ
ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ.
ಷೇರುಮಾರುಕಟ್ಟೆಯಲ್ಲಿ ವಂಚನೆ ಪ್ರಕರಣ ಮೇರೆಗೆ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮಂಗಳವಾರ ಸಿಎನ್ಬಿಸಿ ಅವಾಝ್ನ ಮಾಜಿ ಮಾರ್ಕೆಟ್ ಸಂಪಾದಕ, ನಿರೂಪಕ ಪ್ರದೀಪ್ ಪಾಂಡ್ಯ ಮತ್ತು
ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.