Showing 20 of 2382 posts • Page 118 of 120
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ.
ಇಂದು 58 ಕ್ಷೇತ್ರಗಳಲ್ಲಿ 6 ನೇ ಹಂತದ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ವಿಕಸಿತ ಭಾರತದ ನಿರ್ಮಾಣವಾಗುವವರೆಗೆ ಅಂದರೆ, 2047ರವರೆಗೆ ನಾನು ಕೆಲಸ ಮಾಡಬೇಕು ಎಂಬುದು ದೇವರ ಆದೇಶವಾಗಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ 2047ರವರೆಗೆ ನಾನೇ ಪ್ರಧಾನಿ ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪದಲ್ಲಿ ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರನ್ನು ವಿಚ್ಛೇದಿತ ಪತ್ನಿಯ ಮನೆಯಲ್ಲಿ ಅಕ್ರಮ ಪ್ರವೇಶ ಆರೋಪದಡಿಯಲ್ಲಿ ಇಂದು ಬೆಳಗ್ಗೆ ತಾಂಬರಂ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ಮಾರ್ಗವನ್ನು ತೆರವುಗೊಳಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಗೆ ಸಂಬಂಧಪಟ್ಟ ಹೋಟೆಲ್ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
ಬೆಳ್ಳಂಬೆಳಗ್ಗೆ ಲೇಡಿಯೊಬ್ಬಳು ಕಂಠಪೂರ್ತಿ ಕುಡಿದು ಸಾರ್ವಜನಿಕರಿಗೆ ಕಿರಿಕ್ ಮಾಡಿದ ಘಟನೆ ತೆಲಂಗಾಣದ ನಗೋಲೆಯಲ್ಲಿ ನಡೆದಿದೆ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಬೀಗ ಜಡಿಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕಿಡ್ನಿ ಕಸಿ ಮಾಡಲು ಇರಾನ್ಗೆ ಕಳ್ಳಸಾಗಣೆ ಮಾಡುತ್ತಿದ್ದ ಗುಂಪೊಂದನ್ನು ಪೊಲೀಸರು ಬೇಧಿಸಿದ್ದಾರೆ. ಕಳೆದೆರಡು ದಿನಗಳಿಂದ ತ್ರಿಶ್ಶೂರ್ ಮೂಲದ ವ್ಯಕ್ತಿಯ ಬಂಧಿಸಿದ ನಂತರ ಆಘಾತಕಾರಿ ಸಂಗತಿಗಳು ಬಹಿರಂಗಗೊಂಡಿವೆ.
ಕೇದಾರನಾಥ ಹೆಲಿಪ್ಯಾಡ್ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಬಿಜೆಪಿಯು ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.
ದೇವರ ದರ್ಶನಕ್ಕೆ ಹೋಗುತ್ತಿದ್ದ ಮಿನಿ ಬಸ್ಗೆ ಟ್ರಕ್ವೊಂದು ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇದಾರನಾಥ ಬಳಿ ಹೆಲಿಕಾಪ್ಟರ್ ಒಂದು ಗಾಳಿಯಲ್ಲೇ ಕಟ್ಟು ನಿಂತಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಭಾರಿ ಅನಾಹುತ ತಪ್ಪಿದೆ. ಚಾರ್ ಧಾಮ್ ಯಾತ್ರೆ ಮುಂದುವರೆದಿದೆ.
ಕಿರಿಯ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನರ್ಸಿಂಗ್ ಸಿಬ್ಬಂದಿಯನ್ನು ಬಂಧಿಸಲು ಉತ್ತರಾಖಂಡದ ರಿಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿದ ಘಟನೆ ನಡೆದಿದೆ.
ಕೇರಳದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಕೇರಳದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಗರ್ಭಿಣಿ ಹೊಟ್ಟೆಯಲ್ಲಿರುವ ಮಗುವಿನ ಲಿಂಗಪತ್ತೆ ಪರೀಕ್ಷೆ ಮಾಡುವುದಕ್ಕೆ ಭಾರತದಲ್ಲಿ ನಿರ್ಬಂಧವಿದೆ. ಆದರೆ ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಲಿಂಗ ಪತ್ತೆ ಪರೀಕ್ಷೆ ಮಾಡಲು ಅನುಮತಿ ನೀಡಲಾಗಿದೆ.
ಭದ್ರತಾ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ 7 ನಕ್ಸಲರ ಹತ್ಯೆಯಾದ ಘಟನೆ ಛತ್ತೀಸ್ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಡೆದಿದೆ.
ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೇಜ್ರಿವಾಲ್ ಅವರ ಪೋಷಕರನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದು, ಬಗ್ಗೆ ಕೇಜ್ರಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಮುಂಬೈ ಸಮೀಪದ ಥಾಣೆಯ ಡೊಂಬಿವ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.