Showing 20 of 2480 posts • Page 121 of 124
ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ ಅವರ ಮೇಲಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಮನ್ಸ್ ಜಾರಿಗೊಳಿಸಲಾಗಿದೆ. ಜೂನ್ 29ರಂದು ಕೋರ್ಟ್ಗೆ ಹಾಜರಾಗುವಂತೆ ಅತಿಶಿಗೆ ನ್ಯಾಯಾಲಯ ತಿಳಿಸಿದೆ.
ಲೋಕಸಭಾ ಚುನಾವಣೆಯ ಪ್ರಚಾರ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಜೂನ್ 1ರಂದು 7ನೇ ಹಂತದ ಮತದಾನ ನಡೆಯುತ್ತಿದೆ. ಜೂನ್ 4ರಂದು ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ಹಲವಾರು ಆರೋಪಗಳನ್ನು ಮೋದಿ ಮಾಡಿದರು. ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್ನಿಂದ ಎಂದು ಹೇಳಿಕೆ ನೀಡಿದ್ದಾರೆ.
ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ. ಮೇ 31ರ ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ.
ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರರಕರಣ ದಿನದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.ಅಪ್ರಾಪ್ತ ಆರೋಪಿ ವೇದಾಂತ್ ರಕ್ತದ ಮಾದರಿಯನ್ನು ಬದಲಾಯಿಸಲು ಆಸ್ಪತ್ರೆ ಸಿಬ್ಬಂದಿಗೆ 3 ಲಕ್ಷ ರೂ
ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ಮೂಲ ತಿಳಿಸಿದೆ.ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೀಮಲ್ ಚಂಡಮಾರುತ ಭಾರಿ ಅವಾಂತರಗಳನ್ನು ಸೃಷ್ಟಿಸಿದೆ. ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಸೇರಿ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸಿರುವ ರಣಚಂಡಿ ಮಾರುತ 16 ಜನರನ್ನು ಬಲಿ ಪಡೆದಿದೆ.
ರಾಜ್ಕೋಟ್ ಗೇಮ್ ಝೋನ್ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರು, ಪಾಲಿಕೆ ಸಿಬ್ಬಂದಿ ಸೇರಿದಂತೆ 5 ಅಧಿಕಾರಿಗಳು ಅಮಾನತು ಮಾಡಲಾಗಿದೆ.
ಉಗ್ರರು, ಹಲ್ಲೆಕೋರರ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟುಮಾಡುವ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗವಿಲ್ಲಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸೇಲಂನ ಫೇರ್ಲ್ಯಾಂಡ್ಸ್ನಲ್ಲಿ ರಾತ್ರಿ ಊಟ ಮಾಡಿದ ನಂತರ ಏಳು ವರ್ಷದ ಬಾಲಕಿಯೊಬ್ಬಳಿಗೆ ಮೂಗಿನಿಂದ ರಕ್ತಸ್ರಾವವಾಗಿದ್ದು, ಹಠಾತ್ ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ʻರೆಮೇಲ್ʼ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಅಸ್ಸಾಂನಲ್ಲಿ ಭಾರಿ ಮಲೇಯಾಗುವ ಸಂಭವವಿದೆ. ಈ ಹಿನ್ನಲೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ವರ್ಷದ ಮೊದಲ ಚಂಡಮಾರುತ ‘ರೆಮೆಲ್’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಗಂಟೆಗೆ 135 ಕಿ.ಮೀ.ವರೆಗೂ ವೇಗದಲ್ಲಿ ಲಗ್ಗೆ ಇಟ್ಟ ಈ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ,
ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಮತ್ತು ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಕೂಡ ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇವಿಎಂ ಧ್ವಂಸಗೊಳಿಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಪ್ರಶಾಂತ್ ಜಗದೇವ್ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಪೊಲೀಸ್ ಪೇದೆಗಳು ಬಿಯರ್ ಸೇವಿಸಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರೇ ಮಾಹಿತಿ ನೀಡಿದ್ದಾರೆ.
ಬಿಭವ್ ಕುಮಾರ್ ನಿಂದ ಹಲ್ಲೆ ಆರೋಪದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
ರಸ್ತೆ ಬದಿಯ ಶೆಡ್ಗೆ ಖಾಸಗಿ ಕಂಪನಿಯ ಬಸ್ವೊಂದು ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾದ ವೆರ್ನಾದಲ್ಲಿ ನಡೆದಿದೆ.
ನಾಸಿಕ್ನಲ್ಲಿ ಐಟಿ ಅಧಿಕಾರಿಗಳ ತಂಡ ಭರ್ಜರಿ ಬೇಟೆಯಾಡಿದೆ. ಮುಂಬೈನ ಪ್ರಖ್ಯಾತ ಜ್ಯುವೆಲ್ಲರಿ ಶಾಪ್ ಒಂದರ ಮೇಲೆ ಧಿಡೀರ್ ದಾಳಿ ನಡೆಸಲಾಗಿದ್ದು, ಕೋಟಿ ಕೋಟಿ ಹಣ ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಮುಂದಿನ ಎರಡು ಮೂರು ವರ್ಷಗಳಲ್ಲಿ ನಕ್ಸಲ್ ಸಮಸ್ಯೆ ಕೊನೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿ ನೀರಿನ ವಿಚಾರವಾಗಿ ಮತ್ತೆ ಮಹಾಕ್ಯಾತೆ ಎತ್ತಿದೆ. ಮಹಾರಾಷ್ಟ್ರ ಸರ್ಕಾರ ಮತ್ತೆ ತನ್ನ ಹಳೇ ಬುದ್ಧಿ ತೋರಿಸಿದೆ.