Showing 13 of 2453 posts • Page 123 of 123
ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್ ಸೊರೆನ್ ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಮೇ 22) ನಿರಾಕರಿಸಿದೆ.
ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ದೋಣಿ ಮುಳುಗಿ ಆರು ಜನ ನಾಪತ್ತೆಯಾದ ಪ್ರಕರಣ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಡೆಯಾದ ಘಟನೆ ನಡೆದಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವಂತಹ ಬರಹಗಳನ್ನು ಮೆಟ್ರೊ ರೈಲುಗಳಲ್ಲಿ ಬರೆಯುತ್ತಿದ್ದ ಅಂಕಿತ್(33) ನನ್ನು ಇಂದು ಬಂಧಿಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಪ್ರತಿ ರ್ಯಾಲಿಯಲ್ಲೂ ವಾಗ್ದಾಳಿ, ಆರೋಪ, ಟೀಕೆ, ವ್ಯಂಗ್ಯ ಮಾಡುತ್ತಿದ್ದಾರೆ.
ಚುನಾವಣಾ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಅವರಿಗೆ ನಿಮ್ಮ ಬೆಲೆ ಎಷ್ಟು ಎಂದು ಪ್ರಶ್ನಿಸಿದ್ದ ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಹೇಳಿಕೆಯನ್ನು ಚುನಾವಣಾ ಆಯೋಗ ಖಂಡಿಸಿದೆ.
ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದಿದ್ದು ಕಣಿವೆಗೆ ಮಿನಿ ಗೂಡ್ಸ್ ಉರುಳಿಬಿದ್ದ ಪರಿಣಾಮ 18 ಮಂದಿ ಸಾವನಪ್ಪಿದ್ದಾರೆ.ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಪುನೀತ್ ದುಬೆ ಹಾಸ್ಟಲ್ನ ತನ್ನ ಕೊಠಡಿಯಲ್ಲಿ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಇಂದೋರ್ನಲ್ಲಿ ನಡೆದಿದೆ.
ಮುಂಬೈಗೆ ಬರುವ ಫ್ಲೆಮಿಂಗೋ ಪಕ್ಷಿಗಳೇ ಜನರ ಪ್ರಮುಖ ಆಕರ್ಷಣೆಯಾಗಿರುತ್ತದೆ. ಅದನ್ನು ನೋಡಲು ಎಲ್ಲೆಲ್ಲಿಂದಲೋ ಜನರು ಆಗಮಿಸುತ್ತಾರೆ. ಆದರೆ ಏಕಾಏಕಿ 30ಕ್ಕೂ ಅಧಿಕ ಫ್ಲೆಮಿಂಗೋಗಳು ಸಾವನ್ನಪ್ಪಿರುವುದು ಆತಂಕ ಸೃಷ್ಟಿಮಾಡಿತ್ತು.
ಹೆಲಿಕಾಪ್ಟರ್ ದುರಂತದಲ್ಲಿ ಸಾವನಪ್ಪಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆ
ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಆರೋಪ
ತಮಿಳುನಾಡಿನ ತಿರುಚಿ, ಕನ್ಯಾಕುಮಾರಿ, ಊಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಯುವಕರಿಗೆ ಭಯೋತ್ಪಾದನೆ ಮತ್ತು ಇದರಿಂದಾಗುವ ಸಾವು ನೋವು ಮತ್ತು ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.