Showing 20 of 2478 posts • Page 16 of 124
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ, ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರು ನಿಧನರಾಗಿದ್ದಾರೆ.
ವಡೋದರಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದೊಳಗೆ ಉಂಟಾದ ವಿದ್ಯುತ್ ವ್ಯತ್ಯಯದಿಂದ ಪ್ರಯಾಣಿಕರು 30 ನಿಮಿಷಗಳ ಕಾಲ ಎಸಿ, ಬೆಳಕು ಇಲ್ಲದೇ ಪರದಾಡಿದ್ದಾರೆ.
ಬದಿಯಡ್ಕ ಸಮೀಪದ ಮಾರ್ಪನಡ್ಕದಲ್ಲಿ ನಡೆದ ಬ್ಯಾಂಕ್ ಕಾವಲುಗಾರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ ಲಾತೂರ್ನಲ್ಲಿ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ನನ್ನು ಕೇಂದ್ರ ತನಿಖಾ ದಳ ಬಂಧಿಸಿದೆ.
ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ನ ವಿ.ಡಿ.ಸತೀಶನ್ ಸೋಮವಾರ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.
ಬಾಲಿವುಡ್ ನಟ ರಣಬೀರ್ ಕಪೂರ್ ಅಯೋಧ್ಯೆಯಲ್ಲಿ ಕೋಟಿ ಮೌಲ್ಯದ ಭೂಮಿ ಖರೀದಿಸಿದ್ದಾರೆ.
ಹೋಶಿಯಾರಪುರ ಜಿಲ್ಲೆಯಲ್ಲಿ ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಹೊಸದಾಗಿ ತೋಡಿದ್ದ ಕೊಳವೆಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕನನ್ನು ವಿವಿಧ ರಕ್ಷಣಾ ಸಂಸ್ಥೆಗಳು ಮತ್ತು ಸ್ಥಳೀಯ ಸ್ವಯಂಸೇವಕರು ಸೇರಿದಂತೆ ನಡೆಸಿದ ಒಂಬತ್ತು ಗಂಟೆಗಳ ಬೃಹತ್ ಕಾರ್ಯಾಚರಣೆಯ ನಂತರ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಬೆಳವಣಿಗೆಯಲ್ಲಿ ಪುಣೆಯ ಅಹಲ್ಯಾನಗರದ ಧನಂಜಯ ಲೋಖಂಡ ಮತ್ತು ಮನಿಷಾ ವಾಗ್ಮೋರೆ ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆನ್ನಲ್ಲೇ ಈಗ ಸಂಕುಚಿತ ನೈಸರ್ಗಿಕ ಅನಿಲ ದರವೂ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎನ್ಜಿ ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಿಸಲಾಗಿದೆ.
ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದೆ.
ಕೇರಳದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ವೃಷಭ ಮಾಸದ ಪೂಜೆಗಾಗಿ ಇವತ್ತು ಸಂಜೆ ತೆರೆಯಲಿದೆ. ತಂತ್ರಿ ಕಂಠರಾರು ರಾಜೀವರು ಅವರ ಸಮ್ಮುಖದಲ್ಲಿ, ಮುಖ್ಯ ಅರ್ಚಕ ಪಿ.ಎನ್. ಮಹೇಶ್ ನಂಬೂದಿರಿ ಅವರು ಇಂದು ಸಂಜೆ 5 ಗಂಟೆಗೆ ಗರ್ಭಗುಡಿಯ ಬಾಗಿಲನ್ನು ತೆರೆಯಲಿದ್ದಾರೆ.
ನೀಟ್-ಯುಜಿ (NEET-UG) 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದೊಡ್ಡ ಮಟ್ಟದ ಪ್ರಗತಿ ಕಂಡುಬಂದಿದ್ದು, ಮಹಾರಾಷ್ಟ್ರದ ನಾಸಿಕ್ನ ಇಂದಿರಾ ನಗರ ಪ್ರದೇಶದಲ್ಲಿ ಶುಭಂ ಖೈರ್ನಾರ್ ಎಂಬ ಯುವಕನನ್ನು ಮೇ 12 ರಂದು ನಾಸಿಕ್ ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಸಂಶೋಧಕರು ನಾಟ್ಯ ಶಾಸ್ತ್ರದಿಂದ ಪಡೆದ 2,000 ವರ್ಷಗಳಷ್ಟು ಹಳೆಯದಾದ ಭಾರತೀಯ ನೃತ್ಯ ವ್ಯವಸ್ಥೆಯನ್ನು ವಿಶ್ಲೇಷಿಸಲು AI ಅನ್ನು ಬಳಸಿದ್ದಾರೆಂದು ವರದಿಯಾಗಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರದ ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿ ಒಬ್ಬ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
‘ವಂದೇ ಮಾತರಂ’ ಗೀತೆಗೆ ಇನ್ನು ಮುಂದೆ ರಾಷ್ಟ್ರಗೀತೆಯಷ್ಟೇ ಸಮಾನವಾದ ಕಾನೂನು ಸ್ಥಾನಮಾನ ಸಿಗಲಿದೆ.
ಕಥಾ ಬಿಂದು ಪ್ರಕಾಶನ ವತಿಯಿಂದ ಹತ್ತನೇ ಬಾರಿ ಆಯೋಜಿಸಲಾದ ಕನ್ನಡ ಕಂಪು ಕಾರ್ಯಕ್ರಮದಲ್ಲಿ ಯುವ ಗಾಯಕಿ ರಿಶಾಲ್ ಮೆಲ್ಬಾ ಕ್ರಾಸ್ತಾ ಅವರಿಗೆ ಪ್ರತಿಷ್ಠಿತ ಸಾಧನ ಶ್ರೀ ರಾಷ್ಟ್ರ ಪ್ರಶಸ್ತಿ ಪ್ರದಾನಿಸಲಾಯಿತು.
ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತಮಿಳುನಾಡಿನ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಿದ್ದು, ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿಆಡಳಿತಾರೂಢ ಡಿಎಂಕೆ ಪಕ್ಷವು ಸೋಲನ್ನು ಅನುಭವಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಎಂ.ಕೆ. ಸ್ಟಾಲಿನ್ ರಾಜೀನಾಮೆ ನೀಡಿದ್ದಾರೆ.