Showing 20 of 2478 posts • Page 17 of 124
15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್ಡಿಎಫ್ ಸರ್ಕಾರ ಸೋಲುಂಡ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ ನೀಡಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಸರಳ ಬಹುಮತದತ್ತ (118 ಸ್ಥಾನ) ದಾಪುಗಾಲು ಹಾಕುತ್ತಿದ್ದು, ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ.
ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಜಯ ಗಳಿಸಿದೆ. ಕೊಲ್ಲಂ ಜಿಲ್ಲೆಯ ಚಾತನೂರು ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಎಲ್ಲವನ್ನೂ ತಪ್ಪಾಗಿ ವರದಿ ಮಾಡಲಾಗುತ್ತಿದೆ. ನಾವು 100 ಕ್ಕೂ ಹೆಚ್ಚು ಸ್ಥಾನಗಳಿಂದ ಮುಂದಿದ್ದೇವೆ, ಆದರೆ ವರದಿಯಾಗುತ್ತಿಲ್ಲ. ಸೂರ್ಯಾಸ್ತದ ನಂತರ ನಾವು ಗೆಲ್ಲುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.
ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೊಬೈಲ್ಗೆ ರೀಚಾರ್ಜ್ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಜಮ್ಮು ನಗರದ ಹೊರವಲಯದಲ್ಲಿರುವ ಬಂಟಲಾಬ್ನ ಥಾಥ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದು ಬಿದ್ದಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭವಾಗಿದೆ.
ಜೆಟ್ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹಜ್ ಯಾತ್ರೆಯ ವಿಮಾನ ದರವನ್ನು 10,000 ರೂ. ಹೆಚ್ಚಳ ಮಾಡಲಾಗಿದೆ.
ಮದವೇರಿದ ಆನೆಯೊಂದು ಅಟ್ಟಹಾಸಗೈದಿದೆ. ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ ಗಂಭೀರವಾಗಿರುವ ಘಟನೆ ಎರ್ನಾಕುಳಂ ಜಿಲ್ಲೆಯ ಅಂಕಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಕಾಸರಗೋಡಿನ ಅಡೂರಿನ ರವಿ ಎಂಬುವವರ ಮನೆಯಲ್ಲಿ ‘ಚಿನ್ನದ ಉಂಗುರ ಧರಿಸಿದ್ದ’ ಜೀವಂತ ಹಾವು ಕಂಡುಬಂದಿದೆ.
ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ.
ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಬರೋಬ್ಬರಿ 140 ಕೋಳಿಗಳು ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ದರಿಯಾಪುರ ಗ್ರಾಮದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.
ಸೀತಾಂಗೋಳಿಯಲ್ಲಿ ಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು 39 ವರ್ಷದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಸಾಮೂಹಿಕ ವಿವಾಹ ಸಮಾರಂಭದ ವೇಳೆ ಹಠಾತ್, ಭೀಕರ ಬಿರುಗಾಳಿ ಮತ್ತು ಸುಂಟರಗಾಳಿ ಬೀಸಿ ಅಪಾರ ಹಾನಿಯುಂಟಾದ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯಲ್ಲಿ ನಡೆದಿದೆ.