Showing 20 of 2478 posts • Page 18 of 124
ಒಡಿಶಾದಲ್ಲಿ ತಾಪಮಾನ ಹೆಚ್ಚಾಗಿದ್ದು, ಎರಡು ದಿನಗಳಲ್ಲಿ ಜನಗಣತಿ ಕರ್ತವ್ಯದಲ್ಲಿದ್ದ ಇಬ್ಬರು ಶಾಲಾ ಶಿಕ್ಷಕರು ಶಾಖದ ಹೊಡೆತಕ್ಕೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಲ್ಲಂಗಡಿ ಹಣ್ಣು ಸೇವಿಸಿ ದಂಪತಿ ಹಾಗೂ ಅವರ ಇಬ್ಬರು ಪುತ್ರಿಯರು ಮೃತಪಟ್ಟಿರುವ ಘಟನೆ ದಕ್ಷಿಣ ಮುಂಬೈನಲ್ಲಿ ನಡೆದ ಕೌಟುಂಬಿಕ ಸಮಾರಂಭವೊಂದರಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಆರಂಭವಾದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 50 ಗ್ರಾಂ ಎಂಡಿಎಮ್ಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಡಾ. ಉದಿತಾ ತ್ಯಾಗಿ ಅವರು ಮುಸ್ಲಿಮರನ್ನು “ಜಿಹಾದಿ ಹಂದಿಗಳು” ಎಂದು ಉಲ್ಲೇಖಿಸಿ, “ಮುಸ್ಲಿಮರು ಹಂದಿಗಳಂತೆ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ”, ಎಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಗಾಳದಲ್ಲಿ ಗೆಲುವು ಸಾಧಿಸಿದ ನಂತರ ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
ತೀವ್ರ ಶಾಖದಿಂದ ಪ್ರಾಣಿಗಳನ್ನು ರಕ್ಷಿಸಲು ಅರಣ್ಯ ಇಲಾಖೆ ಜೈಪುರದ ನಹರ್ಗಢ ಜೈವಿಕ ಉದ್ಯಾನವನದಲ್ಲಿ ವಿಶೇಷ ಕ್ರಮಗಳನ್ನು ಜಾರಿಗೆ ತಂದಿದೆ.
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಶರದ್ ಪವಾರ್ ಅವರು ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಹನ ಪಾರ್ಕಿಂಗ್ ವಿಚಾರದಲ್ಲಿ ಉಂಟಾದ ಜಗಳದಲ್ಲಿ 34 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಸೋಮವಾರ ಮುಂಜಾನೆ ಪೂರ್ವ ದಿಲ್ಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ನಡೆದಿದೆ.
ಲೇಖಕ, ಪತ್ರಕರ್ತ, ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಬಲ್ಬೀರ್ ಪುಂಜ್ (76) ಶನಿವಾರ ನಿಧನರಾಗಿದ್ದಾರೆ.
ವಾಲ್ಪಾರೈನಲ್ಲಿ ಪ್ರವಾಸಿ ಟಿಟಿ ವ್ಯಾನ್ ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಟಿಸಿಎಸ್ ಹೆಚ್ಆರ್ ಮ್ಯಾನೇಜರ್ ನಿಧಾ ಖಾನ್ಗೆ ಸಂಕಷ್ಟ! ಕೋರ್ಟ್ನಲ್ಲಿ ಗರ್ಭಿಣಿ ಎಂಬ ವಾದ ಮಂಡಿಸಿದ ಪ್ರಮುಖ ಆರೋಪಿ.
2027ರಲ್ಲಿ ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದಲ್ಲಿ ನಡೆಯಲಿರುವ ಅರ್ಧ ಕುಂಭಮೇಳದ ದಿನಾಂಕಗಳನ್ನು ಮೇಳ ಆಡಳಿತ ಮಂಡಳಿಯು ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದೆ.
ಮಲೇಷಿಯಾಗೆ ತೆರಳುತ್ತಿದ್ದ ದೋಣಿ ಮುಳುಗಿದ ಪರಿಣಾಮ ಅಂಡಮಾನ್ ಸಮುದ್ರದಲ್ಲಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿಗರು ಸೇರಿ ಕನಿಷ್ಠ 250 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರು ಮತ್ತು ವಲಸೆ ಸಂಸ್ಥೆ ತಿಳಿಸಿದೆ.
ತಾಲ್ಲೂಕಿನ ವಿರುಪಾಪೂರು ಸೀಮಾದ ನ್ಯಾಷನಲ್ ಲೇಔಟ್ನ ಶೆಡ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವ ಯುವತಿಯನ್ನು ರಕ್ಷಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದು ಅತಿ ವೇಗಕ್ಕಿಂತ ಹೆಚ್ಚಾಗಿ ಚಾಲಕನ ಬೇಜವಾಬ್ದಾರಿಯಿಂದ ಈ ಅಪಘಾತ ನಡೆದಿದೆ. ರಸ್ತೆ ತುಂಬಾ ಕಿರಿದಾಗಿದ್ದು, ಎದುರಿನಿಂದ ಮತ್ತೊಂದು ಲಾರಿ ಬರುತ್ತಿದ್ದಾಗ ಟಿಪ್ಪರ್ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ.
ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ ಓವರ್ ಡೋಸ್ನಿಂದ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.