Showing 20 of 2478 posts • Page 19 of 124
ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿರುವ ಭಾರತೀಯ ತೈಲ ಟ್ಯಾಂಕರ್ಗಳಿಗೆ ಇರಾನ್ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಶನಿವಾರ ಬೆಳಗ್ಗೆ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
1999ರ ಕಾರ್ಗಿಲ್ ಯುದ್ಧದ ವೀರ, ‘ಲಯನ್ ಆಫ್ ಲಡಾಖ್’ ಎಂದೇ ಖ್ಯಾತರಾಗಿದ್ದ ಮಹಾವೀರ ಚಕ್ರ ಪುರಸ್ಕೃತ ನಿವೃತ್ತ ಕರ್ನಲ್ ಸೋನಮ್ ವಾಂಗ್ಚುಕ್ (61) ಅವರು ಏಪ್ರಿಲ್ 10, ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಪ್ರಿಯಕರನ ಜೊತೆ ಸೇರಿಕೊಂಡು ಹೆತ್ತ ಮಗನನ್ನೇ ತಾಯಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಬಸ್ಗೆ ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪೊಲೀಸರು ಸೇರಿದಂತೆ 32 ಮಂದಿ ಗಾಯಗೊಂಡಿರುವ ಘಟನೆ ಕೊಯ್ಲಾಂಡಿಯಲ್ಲಿ ಇಂದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವುದು ಹೆಚ್ಚಾಗುತ್ತಿದೆ. ಕೇರಳದ ಎರ್ನಾಕುಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದು, ರೈಲಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೇಶಿ ಘಾಟ್ನಲ್ಲಿ ಯಮುನಾ ನದಿಯಲ್ಲಿ 30ಕ್ಕೂ ಹೆಚ್ಚು ಪಂಜಾಬ್ ಮೂಲದ ಯಾತ್ರಾರ್ಥಿಗಳಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 22 ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ ಐತಿಹಾಸಿಕ ‘ಆರ್ಟೆಮಿಸ್ 2’ ಬಾಹ್ಯಾಕಾಶ ಯಾನ ಇದೀಗ ಅಂತಿಮ ಹಂತದಲ್ಲಿದೆ. ಈ 10 ದಿನಗಳ ರೋಚಕ ಪಯಣದಲ್ಲಿ ಗಗನಯಾತ್ರಿಗಳ ಆರೋಗ್ಯ ಕಾಪಾಡಲು ಅವರ ಪ್ರಥಮ ಚಿಕಿತ್ಸಾ ಪೆಟ್ಟಿಗೆಯಲ್ಲಿ ಜೀರ್ಣಕ್ರಿಯೆ ಹಾಗೂ ಮಲಬದ್ಧತೆ ನಿವಾರಕ ಔಷಧ ‘ಡಲ್ಕೋಲಾಕ್ಸ್’ ಕೂಡ ಸ್ಥಾನ ಪಡೆದಿದೆ. ಭಾರತದಲ್ಲಿ ಈ ಔಷಧಿಯನ್ನು ‘ಡಲ್ಕೋಫ್ಲೆಕ್ಸ್’ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ಮೋದಿ ಅವರ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಿಹಾರದ ಬಕ್ಸರ್ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನೆಗೆ ನೆರವಾಗುತ್ತಿದ್ದ ಇನ್ನಿಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಯರು ಅಕ್ರಮವಾಗಿ ಸಾಗಿಸುತ್ತಿದ್ದ ₹37 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
48 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಇಂಧನ ಹೆಚ್ಚುವರಿ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಇದರಿಂದಾಗಿ ವಿಮಾನ ಟಿಕೆಟ್ ದರಗಳು ಏರಿಕೆಯಾಗಲಿವೆ.
ರಾಕೆಟ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಅವರ ತಾಯಿ ಗಾಯಗೊಂಡ ನಂತರ ಮಣಿಪುರ ಸರ್ಕಾರ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಿದೆ. ಈ ಘಟನೆಯು ಪ್ರಕ್ಷುಬ್ಧ ರಾಜ್ಯದಲ್ಲಿ ಹೊಸ ಪ್ರತಿಭಟನೆಗಳು ಮತ್ತು ಹಿಂಸಾಚಾರಕ್ಕೆ ಕಾರಣವಾಯಿತು.
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು.
ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಪ್ರಮುಖ ಒತ್ತು ನೀಡುವ ನಿಟ್ಟಿನಲ್ಲಿ, ಖಾಸಗಿ ಕಂಪನಿಯೊಂದು ಋಷಿಕೇಶದ ಗಂಗಾ ಬ್ಯಾರೇಜ್ನಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ನಡೆಸಿತು.
ಏರ್ ಇಂಡಿಯಾ ಮುಖ್ಯ ಕಾರ್ಯನಿರ್ವಾಹಕ ಕ್ಯಾಂಪ್ಬೆಲ್ ವಿಲ್ಸನ್ ರಾಜೀನಾಮೆ ನೀಡಿದ್ದಾರೆ, ಆದರೆ ಉತ್ತರಾಧಿಕಾರಿ ನೇಮಕವಾಗುವವರೆಗೆ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ವರದಿ ಕೇಳಿಬಂದಿದೆ.
ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ.
ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಸ್ಕೆಟ್ಬಾಲ್ ಸ್ಟ್ಯಾಂಡ್ತಲೆಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನಪ್ಪಿರುವ ಘಟನೆ ಪುಣೆಯ ಮೆರೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಒಡಿಶಾದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.