Showing 20 of 2478 posts • Page 2 of 124
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಶನಿವಾರ ಗಡಿ ಭದ್ರತಾ ಪಡೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಅಮೆರಿಕದ ಮಿಚಿಗನ್ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಟೆಕ್ಸಾಸ್ ಏರ್ ನ್ಯಾಷನಲ್ ಗಾರ್ಡ್ಗೆ ಸೇರಿದ F-16 ಯುದ್ಧವಿಮಾನ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಸಮಯಕ್ಕೆ ಸರಿಯಾಗಿ ಹೊರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ವಿಶೇಷವಾಗಿ ಬೆಳಗಿತು.
ಮುಂಬರುವ 2027ರಲ್ಲಿ ನಡೆಯುವ 5ನೇ ಆವೃತ್ತಿ ಮಹಿಳಾ ಪ್ರೀಮಿಯರ್ ಲೀಗ್ನ ವೇಳಾಪಟ್ಟಿ ಹಾಗೂ ಹರಾಜು ದಿನಾಂಕವನ್ನು WPL ಪ್ರಕಟಿಸಿದೆ.
ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಗಣೇಶನು ಬಿರಿಯಾನಿ ತಯಾರಿಸುತ್ತಿರುವ ಚಿತ್ರವಿದ್ದ ಬ್ಯಾನರ್ನಿಂದಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ
ಇಲ್ಲಿನ ಭಾರತ್ ಮಂಟಪದಲ್ಲಿ ಆರಂಭವಾಗಿರುವ 18ನೇ ಬ್ರಿಕ್ಸ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ಒಕ್ಕೂಟವು ಯಾವುದೇ ದೇಶದ ವಿರುದ್ಧ ಇರುವ ವೇದಿಕೆಯಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಯಂತ್ರಗಳಿಲ್ಲ, ಸರ್ಕಾರದ ನೆರವಿಲ್ಲ, ಈಜು ಕೂಡ ಬರಲ್ಲ. ಆದರೂ 21 ವರ್ಷದ ಒಬ್ಬ ವಿದ್ಯಾರ್ಥಿ ತನ್ನ ಎರಡು ಕೈಗಳಿಂದಲೇ ತಿಂಗಳುಗಟ್ಟಲೆ ನದಿಗಿಳಿದು ಟನ್ಗಟ್ಟಲೆ ಕಸವನ್ನು ಹೊರತೆಗೆದಿದ್ದಾನೆ. ಇವನೇ ಬಿಯೋರಾದ ಸುರೇಂದ್ರ ಸಿಂಗ್ ಚೌಧರಿ
ಗಡಿ ದಾಟಿದರೂ ನಾಡಿನ ಸಂಸ್ಕೃತಿ, ಭಾಷೆ ಮತ್ತು ಬಾಂಧವ್ಯವನ್ನು ಜೀವಂತವಾಗಿರಿಸುವ ಉದ್ದೇಶದೊಂದಿಗೆ ಕರ್ನಾಟಕ ಸಂಘ ದುಬೈ (KSD) ದುಬೈನ ಮಂಖೂಲ್ನಲ್ಲಿರುವ ಬಿ-ಟೌನ್ ಸಭಾಂಗಣದಲ್ಲಿ ಸೆಪ್ಟೆಂಬರ್ 6 ರಂದು ‘ಡಾರ್ಟ್ಸ್ ಟೂರ್ನಮೆಂಟ್-2026’ ಅನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿತು.
ದೇಣಿಗೆ ಕಳ್ಳತನ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ರಾಮ ಮಂದಿರ ನಿರ್ವಹಣೆಯ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಹೊಸ ಹೊಸ ಕ್ರಮಗಳನ್ನು ಜಾರಿಗೆ ತರಲು ಮುಂದಾಗುತ್ತಿದೆ.
ವೇಗವಾಗಿ ಬಂದ ಟ್ರಕ್ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಗೋಂದಿಯಾ ಜಿಲ್ಲೆಯಲ್ಲಿ ನಡೆದಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಎಲ್ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ ಅವಧಿಯನ್ನ 45 ದಿನಗಳಿಂದ 25 ದಿನಗಳಿಗೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಸುರೇಶ್ ಗೋಪಿ ಸೋಮವಾರ ಘೋಷಿಸಿದ್ದಾರೆ.
ನಗರದ 5 ಅಂತಸ್ತಿನ ಕಟ್ಟಡ ಕುಸಿದು ಏಳು ಜನ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಪ್ರಕರಣ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಉನ್ನತ ತನಿಖೆಗೆ ಕೋರ್ಟ್ ಆದೇಶಿಸಿದೆ.
ದಕ್ಷಿಣ ದೆಹಲಿಯ ಶಾಂತಿ ನಿಕೇತನ್ ಪ್ರದೇಶದಲ್ಲಿ ಐದು ಮಹಡಿಗಳ ಪಿ.ಜಿ ಕಟ್ಟಡ ಕುಸಿದು ಬಿದ್ದಿದೆ. ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಸಾಗರ್ ಜಿಲ್ಲೆಯಲ್ಲಿ ನಡೆದ ಕಳ್ಳಬಟ್ಟಿ ಮತ್ತು ಅಕ್ರಮ ಮದ್ಯ ಸೇವನೆ ದುರಂತದಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಶಾನ್ಯ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜಾರ್ಖಂಡ್ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಷಪೂರಿತ ಮದ್ಯ ಸೇವಿಸಿ 9 ಜನ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.
ಕೇರಳ-ಕರ್ನಾಟಕ ಗಡಿಯ ಬಳಿ ವಯನಾಡಿನಲ್ಲಿ ವಾಹನ ತಪಾಸಣೆ ವೇಳೆ ಭಾರಿ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ. ಚಾಲಕನ ಸೀಟಿನ ಕೆಳಗೆ ಅಡಗಿಸಿಟ್ಟಿದ್ದ 1.44 ಕೋಟಿ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದೀಗ ಮೂವರು ಹೊಸ ಟ್ರಸ್ಟಿಗಳ ನೇಮಕ ಮಾಡಿದೆ.