Showing 20 of 2478 posts • Page 23 of 124
ಲ್ಯಾಂಡಿಂಗ್ ವೇಳೆ ನೋಸ್ ವೀಲ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಹೈದರಾಬಾದ್ನಿಂದ ಥೈಲ್ಯಾಂಡ್ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಭಾರೀ ದುರಂತದಿಂದ ತಪ್ಪಿದೆ.
ಡಿಸೆಂಬರ್ನಲ್ಲಿ ವಿಮಾನಯಾನ ಸಂಸ್ಥೆ ಎದುರಿಸಿದ ವಿಮಾನ ಬಿಕ್ಕಟ್ಟಿನ ನಂತರ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಹೊಸದೆಹಲಿ: ಕಂಬಳವನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ನಡೆಸಬಾರದು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. “ಒಂದು ಸಂಸ್ಕೃತಿಯನ್ನು ರಾಜ್ಯದ ಇತರ ಭಾಗಗಳ ಜನರಿಗೂ ಪರಿಚಯಿಸುವುದರಲ್ಲಿ ತಪ್ಪೇನಿದೆ? ಅದನ್ನು ಕೇವಲ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು?” ಎಂದು ನ್ಯಾಯಾಲಯವು ಅರ್ಜಿದಾರರನ್ನು ಪ್ರಶ್ನಿಸಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಘಟನೆ ‘ಪೇಟಾ’ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. […]
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಚರ್ಚೆ ಮಾಡಿದ್ದಾರೆ.
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತದ ನಡುವೆಯೂ ಭಾರತ 5000 ಟನ್ ಡೀಸೆಲ್ ರಫ್ತು ಮಾಡುತ್ತಿದೆ. ಡೀಸೆಲ್ ಪೈಪ್ಲೈನ್ ಮೂಲಕ ಬಾಂಗ್ಲಾದೇಶವನ್ನು ತಲುಪಿ ಪರ್ಬತಿಪುರ ಗಡಿಯ ಮೂಲಕ ಪ್ರವೇಶಿಸಲಿದೆ.
ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20% ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಬ್ಯಾರೆಲ್ಗೆ 100 ಡಾಲರ್ ದಾಟಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸದ್ಯಕ್ಕೆ ಹೆಚ್ಚಿಸಲಾಗುವುದಿಲ್ಲ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ದೇಶಾದ್ಯಂತ ನಿರಂತರ ಇಂಧನ ಪೂರೈಕೆ ಮಾರ್ಗಗಳನ್ನು ನಿರ್ವಹಿಸಲು ಅಧಿಕಾರಿಗಳು ಪ್ರಯತ್ನಗಳನ್ನು ಹೆಚ್ಚಿಸಿದ್ದಾರೆ.
ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ 55 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ […]
ಒಡಿಶಾದ ಪುರಿ ಜಗನ್ನಾಥ ದೇವಾಲಯದ ಪವಿತ್ರ ‘ಪತಿತಪಾವನ ಬಾನಾ’ (ಧ್ವಜ) ಮತ್ತು ನೀಲಚಕ್ರದ ಮೇಲೆ ಹದ್ದೊಂದು ಕುಳಿತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಪ್ರತಿಭಟಿಸಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಹೇರಲಾಗಿದ್ದ ಬಂದ್ ಅಂತ್ಯಗೊಂಡಿದೆ. ಸೋಮವಾರದಿಂದ ಕಾಶ್ಮೀರದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಅಧಿಕೃತವಾಗಿ ಆರಂಭಗೊಂಡಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ 83 ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಹಿಂದೂ ಸಂಘಟನೆಗಳು ತಕ್ಷಣದ ಬಂಧನಕ್ಕೆ ಆಗ್ರಹಿಸಿವೆ.
ರಾಷ್ಟ್ರ ರಾಜಧಾನಿ ದೆಹಲಿಯ ಉತ್ತಮ್ ನಗರದ ಜೆಜೆ ಕಾಲೋನಿಯಲ್ಲಿ ಹೋಳಿ ಬಲೂನ್ ನೀರು ಮಹಿಳೆಯೊಬ್ಬರ ಮೇಲೆ ಬಿದ್ದಿದ್ದರಿಂದ ಸಂಘರ್ಷ ಉಂಟಾಗಿದ್ದು, ಘಟನೆಯಲ್ಲಿ ತರುಣ್ (26) ಎಂಬ ಯುವಕ ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ.
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ನೋಗೆ ವಾಪಸ್ ಆಗಿ, ತುರ್ತು ಲ್ಯಾಂಡಿಂಗ್ ಆಗಿದೆ.
ಉತ್ತರ ಕೋಲ್ಕತ್ತಾದ ಪೈಕ್ಪಾರಾದ ಪಾಳುಬಿದ್ದ ಕ್ಲಬ್ನ ಬೀಗ ಹಾಕಿದ ಕೋಣೆಯೊಳಗೆ ಕಚ್ಚಾ ಬಾಂಬ್ಗಳು ಶನಿವಾರ ಮುಂಜಾನೆ ಸ್ಫೋಟಗೊಂಡ ನಂತರ ಭೀತಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕದೊಂದಿಗಿನ ಯುದ್ಧದ ಸಮಯದಲ್ಲಿ ನೆರೆಯ ರಾಷ್ಟ್ರಗಳ ಮೇಲೆ ನಡೆಸಿದ ದಾಳಿಗಳಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕ್ಷಮೆಯಾಚಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ.
ದೇಶೀಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳನ್ನು ಹೆಚ್ಚಿಸಲಾಗಿದ್ದು, ಇಂದಿನಿಂದ ಜಾರಿಗೆ ಬರಲಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಇಂಧನ ವೆಚ್ಚಗಳ ಮಧ್ಯೆ ಇದು ಬಂದಿದೆ.
ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ IAF Su-30MKI ಜೆಟ್ ಪತನಗೊಂಡ ನಂತರ ಇಬ್ಬರು ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ಗಳು ಸಾವನ್ನಪ್ಪಿದ್ದಾರೆ.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.