Showing 20 of 2478 posts • Page 24 of 124
ಭಾರತೀಯ ರಾಯಭಾರ ಕಚೇರಿಯು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಮತ್ತು ಸಾರಿಗೆ, ಆಹಾರ, ವಸತಿ ವ್ಯವಸ್ಥೆ ಮಾಡಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.
ಇರಾನ್ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯಿಂದ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆದಿದ್ದು, ಜಮ್ಮ ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿದ್ದವು.
ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಬೆನ್ನಲ್ಲೇ ಗಲ್ಫ್ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಿವಾರ ಪತ್ರ ಬರೆದಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭಾರೀ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಸೈದಾ ಕಡಲ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ನ ಹೆಚ್ಚಿನ ಹೊರೆಯನ್ನು ಕಡಿಮೆ ಮಾಡಲು 14 ವರ್ಷ ವಯಸ್ಸಿನ ಬಾಲಕಿಯರಿಗೆ ದೇಶಾದ್ಯಂತ ಏಕ-ಡೋಸ್ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಅಭಿಯಾನವನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಸಜ್ಜಾಗಿದೆ.
ಬಾಡಿ ಬಿಲ್ಡರ್ ಮಯಾಂಕ್ ಪವಾರ್ (37) ಹಠಾತ್ ಮೃತಪಟ್ಟಿದ್ದಾರೆ. ಸ್ಪ್ಲಿಟ್ಸ್ವಿಲ್ಲಾ 7ನೇ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ಮೂಲಕ ಪವಾರ್ ಭಾರಿ ಜನಪ್ರಿಯತೆ ಪಡೆದಿದ್ದರು.
ಇಲೆಕ್ಟ್ರಿಕ್ ಸ್ಕೂಟರ್ಗೆ ಬೆಂಕಿ ತಗುಲಿದ ಘಟನೆ ಕಾಸರಗೋಡು ಹೊರವಲಯದ ಅಣಂಗೂರಿನಲ್ಲಿ ನಡೆದಿದೆ.
ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಏಪ್ರಿಲ್ 1 ನೇ ತಾರೀಖಿನಿಂದ ನಗದು ಪಾವತಿ ಸೇವೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕೇರಳವನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಬಹುನಿರೀಕ್ಷಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಪರಿಗಣಿಸಲು ಸಜ್ಜಾಗಿದ್ದು, ರಾಜ್ಯದ ಸಾಂವಿಧಾನಿಕ ಹೆಸರನ್ನು ಅದರ ಸಾಂಪ್ರದಾಯಿಕ ಮಲಯಾಳಂ ಉಚ್ಚಾರಣೆ ಮತ್ತು ಸಾಂಸ್ಕೃತಿಕ ಗುರುತಿಗೆ ಅನುಗುಣವಾಗಿ ಬದಲಾಯಿಸಲು ಮುಂದಾಗಿದೆ.
ಫೆ.26ಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಆಗಮಿಸಲಿದ್ದಾರೆ.
ವ್ಯಕ್ತಿಯೋರ್ವನನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ ಘಟನೆ ಮಂಜೇಶ್ವರದ ಪಾವೂರುನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನ ಕಿದ್ವಾಯಿ ನಗರದಲ್ಲಿ ನಡೆದಿದೆ.
ಭಾರತೀಯ ವಾಯುಪಡೆಯ ಮತ್ತೊಂದು ತೇಜಸ್ ಲಘು ಯುದ್ಧ ವಿಮಾನ ಅಪಘಾತದಲ್ಲಿ ಪತನವಾಗಿದೆ.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದು, ಅವರಿಂದ 1 ಕೆಜಿ 60 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮದುವೆಗೂ ಮುನ್ನಾ ದಿನವೇ ಇಬ್ಬರು ಸಹೋದರಿಯರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೋಧ್ಪುರದ ಮನೈ ಗ್ರಾಮದಲ್ಲಿ ನಡೆದಿದೆ.
ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಮಗು ಮೃತಪಟ್ಟು, ದಂಪತಿ ಗಾಯಗೊಂಡಿರುವ ಘಟನೆ ಅಂಪಾರು ಗ್ರಾಮದ ಬಾಲ್ಕಟ್ ಎಂಬಲ್ಲಿ ಫೆ.21ರಂದು ಸಂಜೆ ವೇಳೆ ನಡೆದಿರುವುದು ವರದಿಯಾಗಿದೆ.
ಮದುವೆಯ ಅತಿಥಿಯಂತೆ ನಟಿಸಿ ವಧುವಿನ ಆಭರಣ ಬ್ಯಾಗ್ ಕದ್ದ ಘಟನೆ ಜೈಪುರದಲ್ಲಿ ನಡೆದಿದೆ.
58 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿಗಳು ವಿಚ್ಚೇದನ ಪಡೆಯಲು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದರೆ ಡಿವೋರ್ಸ್ ನೀಡಲು ರಾಜಸ್ಥಾನ ಹೈಕೋರ್ಟ್ ನಿರಾಕರಿಸಿದೆ.