Showing 20 of 2478 posts • Page 26 of 124
“ನಾನು ಠಾಕೂರ್, ನನ್ನ ಜೊತೆ ಆಟವಾಡಬೇಡಿ” ಗ್ರಾಹಕನಿಗೆ ಜಾತಿ ಅಹಂಕಾರ ತೋರಿಸಿ ಬ್ಯಾಂಕ್ ಉದ್ಯೋಗಿ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ.
ಪಬ್ಜಿ ಗೇಮ್ ಆಡುತ್ತಲೇ ರಕ್ತದೊತ್ತಡ ಹೆಚ್ಚಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಾಧೇಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಹುಗಢ ಗ್ರಾಮದ ಕರು ಟೋಲಾದ ಅಪ್ಗ್ರೇಡ್ ಮಿಡಲ್ ಶಾಲೆಯಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಹಿರಿಯ ರಾಜಕಾರಣಿ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಭಾರಿ ಹೆಚ್ಚಳ ಕಂಡಿದೆ.
ಪಾರಿವಾಳದೊಂದು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಚ್ಚಿಕೊಂಡು ಪರಾರಿಯಾದ ಘಟನೆ ರಾಜಸ್ಥಾನದ ನಾಗೌರ್ನ ದೇಗಾನಾದ ಚಿನ್ನದ ಮಾರುಕಟ್ಟೆಯಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ನಡೆದಿದೆ.
ಫರಿದಾಬಾದ್ನ ಸೂರಜ್ಕುಂಡ್ ಜಾತ್ರೆಯಲ್ಲಿ ‘ಸುನಾಮಿ’ ಉಯ್ಯಾಲೆ ತುಂಡಾಗಿ ಬಿದ್ದಿದೆ.
ಬೆಳಿಗ್ಗೆ ಚಹಾ ತೋಟವೊಂದರಲ್ಲಿ ಆಕಸ್ಮಿಕವಾಗಿ 15 ಅಡಿ ಆಳದ ನೆಲಮಟ್ಟದ ನೀರಿನ ತೊಟ್ಟಿಗೆ ಮೂರು ವರ್ಷದ ಆನೆ ಮರಿ ಬಿದ್ದಿರುವ ಘಟನೆ ನಡೆದಿದೆ.
ವಿದ್ಯುತ್ ಗೀಸರ್ ಸ್ಫೋಟದಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಆಗ್ನೇಯ ದೆಹಲಿಯಲ್ಲಿ ನಡೆದಿದೆ.
ಕಷ್ಟದ ಸಮಯದಲ್ಲಿ ಕೊಟ್ಟ ಹಣವನ್ನು ವಾಪಸ್ ಕೊಡದೇ ಇದ್ದಿದ್ದಕ್ಕೆ ಕೊಡಗಿನ ಉದ್ಯಮಿಯೊಬ್ಬರು ಮನನೊಂದು ಕೇರಳದಲ್ಲಿರುವ ಸಾಲ ಪಡೆದಿದ್ದ ವ್ಯಕ್ತಿಯ ಮನೆ ಮುಂದೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತದಲ್ಲಿ ವಾಸ ಮಾಡುವ ಎಲ್ಲರೂ ಹಿಂದೂಗಳು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹುಡುಗಿಯ ಮೇಲೆ ಗೂಳಿಯೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಆಘಾತಕಾರಿ ಘಟನೆ ಲಕ್ನೋದ ಚೌಪಟ್ಟಿ ಪ್ರದೇಶದಲ್ಲಿ ನಡೆದಿದೆ.
ಸುಮಾರು 20 ಮಕ್ಕಳ ಪ್ರಾಣ ಉಳಿಸಲು ಅಂಗನವಾಡಿ ಅಡುಗೆಯವರೊಬ್ಬರು ತಮ್ಮ ಪ್ರಾಣವನ್ನೇ ಬಲಿ ಕೊಟ್ಟಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ನಡೆದಿದೆ.
ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ವಕೀಲರು ಥಳಿಸಿದ್ದಾರೆ, ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.
ನಿವೃತ್ತ ಸೇನಾ ಅಧಿಕಾರಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಕಿಲೋ ಮೀಟರ್ ದೂರದವರೆಗೆ ಇಬ್ಬರು ಕಿಡಿಗೇಡಿಗಳು ಎಳೆದೊಯ್ದಿದ್ದು ದೈಹಿಕವಾಗಿ ಹಲ್ಲೆ ಕೂಡ ನಡೆಸಿದ್ದಾರೆ.
ಆಸ್ತಿ ವಿಚಾರದಲ್ಲಿ ಸೋದರ ಸಂಬಂಧಿಯ ಜೊತೆಗೆ ಜಗಳ ಕಾದ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಕೊಲೆಗೈದ ಘಟನೆ ಕರ್ನಾಟಕ ಗಡಿಭಾಗ ತಲಪಾಡಿ ಬಳಿಯ ತುಮ್ಮಿನಾಡಿನಲ್ಲಿ ನಡೆದಿದೆ. ಇಬ್ಬರ ಜಗಳ ಬಿಡಿಸಲು ಹೋದ 16 ವರ್ಷದ ಮಗಳು ದುರಂತ ಬಲಿಯಾಗಿದ್ದಾಳೆ.
ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ.
ಮಹಾರಾಷ್ಟ್ರದ ಯುಟ್ಯೂಬರ್ ಆಕಾಶ್ ಜಾಧವ್ ನನ್ನು ಛತ್ತೀಸ್ಗಢದ ಮಹಾಸಮುಂದ್ ಜಿಲ್ಲೆಯ ಪೊಲೀಸರು ಗಾಂಜಾ ಸಾಗಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದ್ದು ಕೆಲವು ವಸ್ತುಗಳಿಗೆ ತೆರಿಗೆ ವಿನಾಯಿತಿ ನೀಡಿದ್ದಾರೆ.