Showing 20 of 2478 posts • Page 29 of 124
2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.
ನಕಲಿ ವೈದ್ಯ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ನೋಡಿಕೊಂಡು ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಆಪರೇಷನ್ ಮಾಡಿ ಮಹಿಳೆ ಮೃತಪಟ್ಟು, ಮಗು ಬಚಾವಾದ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ.
ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು.
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳವಾರ ಬೆಳಗ್ಗೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ಪಕ್ಷ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸೋನಿಯಾ ಗಾಂಧಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಕ್ಕಾಗಿಯೇ ಅವರು ನಿಯಮಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಗಾಗ ಆಸ್ಪತ್ರೆಗೆ ಭೇಟಿ ನೀಡುತ್ತಿರುತ್ತಾರೆ. ಈ ನಡುವೆ ಮಂಗಳವಾರ ಬೆಳಗ್ಗೆ ಅವರನ್ನು ದೆಹಲಿಯ […]
ಹಿರಿಯ ಕಾಂಗ್ರೆಸ್ ನಾಯಕ, ಪುಣೆಯ ಮಾಜಿ ಸಂಸದ ಸುರೇಶ್ ಕಲ್ಮಾಡಿ ಇಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ತಿರುಮಲ ತಿರುಪತಿಯ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬನು ಮಂಗಳವಾರ ತಡರಾತ್ರಿ ದೇವಸ್ಥಾನದ ಗೋಪುರವನ್ನು ಏರಿ, ಕಲಶಗಳಿಗೆ ಹಾನಿ ಮಾಡಿ, ಕೆಳಗಿಳಿಯಲು ಮದ್ಯ ನೀಡಬೇಕು ಎಂದು ಪಟ್ಟು ಹಿಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ ಸುಮಾರು 10 ಗಂಟೆಗೆ, ಏಕಾಂತ ಸೇವೆಯ ಬಳಿಕ ಈ ಘಟನೆ ನಡೆದಿದ್ದು, ಆ ವ್ಯಕ್ತಿ ಭದ್ರತಾ ಸಿಬ್ಬಂದಿಯನ್ನು ಕಣ್ತಪ್ಪಿಸೆ ದೇವಸ್ಥಾನದ ಕಾಂಪೌಂಡ್ ಅನ್ನು ಹಾರಿದ್ದಾನೆ . ಬಳಿಕ ಮಹಾದ್ವಾರದ ಬಳಿ ಇರುವ ಗೋಪುರವನ್ನು ಏರಿ, ಎರಡು ಕಲಶಗಳನ್ನು […]
ಇಂದೋರ್ನಲ್ಲಿ ನೀರು ಇರಲಿಲ್ಲ ಹಾಗಾಗಿ ಕುಡಿಯೋಕೆ ವಿಷ ಹಂಚಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಬರ್ಲಿನ್: ಜರ್ಮನಿಯಲ್ಲಿರುವ ನಿವಾಸದಲ್ಲಿ ಅಗ್ನಿ ಅವಘಡ ಉಂಟಾಗಿ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ಆಘಾತ ಉಂಟಾಗಿದೆ. ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್ನ ಅಪಾರ್ಟ್ಮೆಂಟ್ನ ಮೇಲಿನ ಮಹಡಿಯಿಂದ ಹಾರಿದ್ದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೊಸ ವರ್ಷದ ದಿನದಂದೇ ಈ ಅವಘಡ ಸಂಭವಿಸಿದೆ. ತೆಲಂಗಾಣದ […]
ಮಂಗಳೂರು : ಹೊಸ ವರ್ಷದ ಮೊದಲ ದಿನವೇ ಎಲ್ಪಿಜಿ ಬಳಕೆದಾರರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಈ ಬಾರಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ. ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಮೊದಲು ರೂ.1580.50ಕ್ಕೆ ಲಭ್ಯವಾಗುತ್ತಿದ್ದರೆ, ಈಗ ರೂ.1691.50ಕ್ಕೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಬೆಲೆ ರೂ.1795ಕ್ಕೆ ಏರಿದ್ದು, ರೂ.111 ರಷ್ಟು ಹೆಚ್ಚಳವಾಗಿದೆ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ತಕ್ಕಂತೆ ರೂ.1849.50 ಮತ್ತು ರೂ.1700 ರುಪಾಯಿಗಳಲ್ಲಿ ಸಿಲಿಂಡರ್ ಲಭ್ಯವಾಗಲಿದೆ. ಆದಾಗ್ಯೂ, […]
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಜನತೆಗೆ ಕ್ರೈಂ ಪ್ರಕರಣಗಳು ದುಃಸ್ವಪ್ನವಾಗಿ ಕಾಡುತ್ತಿದೆ. ಕಳ್ಳತನ, ದರೋಡೆ, ಸುಲಿಗೆ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದೆ. ಒಂದೊಂದು ಪ್ರಕರಣಗಳೂ ಸಾರ್ವಜನಿಕರಿಗಿರಲಿ ಪೊಲೀಸರ ನಿದ್ದೆಯನ್ನೂ ಕೆಡಿಸುತ್ತಿದೆ. ಒಂದೆಡೆ ಕ್ರೈಂ ರೇಟ್ ಗೆ ಬ್ರೇಕ್ ಹಾಕಲು ಖಾಕಿ ಪಡೆ ಶತಪ್ರಯತ್ನ ಮಾಡುತ್ತಿದ್ದರೆ ಮತ್ತೊಂದೆಡೆ ದುಷ್ಕರ್ಮಿಗಳು ಪೊಲೀಸರ ಕಾರ್ಯಕ್ಷಮತೆಯನ್ನ ಪರೀಕ್ಷಿಸುವಂತೆ ಮಾಡುತ್ತಿದ್ದಾರೆ. ರಾತ್ರಿ ವೇಳೆ ಅಂಗಡಿಗಳು ಮನೆಗಳಿಗೆ ಕನ್ನ ಹಾಕುವ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ಇತ್ತೀಚೆಗಷ್ಟೆ ಮುಸುಕುಧಾರಿಗಳು ಮಾರಕಾಸ್ತ್ರಗಳನ್ನ ಹಿಡಿದು ರಾಜಾರೋಷವಾಗಿ ಅಡ್ಡಾಡಿದ ದೃಶ್ಯಗಳು ಮಾಸದಿರುವ ಮುನ್ನವೇ ಒಂದೇ […]
ಕಲುಷಿತ ನೀರು ಕುಡಿದು ಮೂವರು ಮೃತಪಟ್ಟು, 100ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಭಗೀರಥ್ ಪುರ ಪ್ರದೇಶದಲ್ಲಿ ನಡೆದಿದೆ ಎಂದು ನಗರದ ಮೇಯರ್ ತಿಳಿಸಿದ್ದಾರೆ.
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು.
ಮಕರ ಜ್ಯೋತಿ ಯಾತ್ರೆಗಾಗಿ ಶಬರಿಮಲೆ ದೇವಾಲಯವನ್ನು ಮಂಗಳವಾರ ಸಂಜೆ 5 ಗಂಟೆಗೆ ಮೇಲ್ಶಾಂತಿ ಇ.ಟಿ. ಪ್ರಸಾದ್ ಅವರು ಮುಖ್ಯ ಪೀಠಾಧಿಪತಿ ಮಹೇಶ್ ಮೋಹನರ್ ಅವರ ನೇತೃತ್ವದಲ್ಲಿ ದೇವಾಲಯವನ್ನು ತೆರೆಯಲಾಯಿತು.
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ.
ರಾಷ್ಟ್ರ ರಾಜಧಾನಿಯಿಂದ ಬ್ಯಾಂಕಾಕ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಬ್ಯುಸಿನೆಸ್ ಕ್ಲಾಸ್ ಕ್ಯಾಬಿನ್ನಲ್ಲಿ ಮತ್ತೊಬ್ಬ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದನೆಂದು ಆರೋಪಿಸಿದಾಗ ಗದ್ದಲ ಭುಗಿಲೆದ್ದಿತು.
ಬೇಕಲ ಬೀಚ್ ಫೆಸ್ಟಿವಲ್ ನ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ಓರ್ವ ಮೃತಪಟ್ಟು, ಮಕ್ಕಳು ಸೇರಿದಂತೆ ಹದಿನೈದಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ರಾತ್ರಿ 10 ಗಂಟೆ ಸುಮಾರಿಗೆ ಮುಂಬೈನ ಭಾಂಡಪ್ನಲ್ಲಿ ನಡೆದಿದೆ.
ಸಿರಿಯಾದ ಮಧ್ಯ ಭಾಗದಲ್ಲಿರುವ ಹೋಮ್ಸ್ ನಗರದಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.