Showing 20 of 2478 posts • Page 46 of 124
ದೇಶದ ಖ್ಯಾತ ಕೈಗಾರಿಕದ್ಯೋಮಿ ರತನ್ ಟಾಟಾ ನಿಧನವಾಗಿದ್ದು, ಅವರಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರು ಅಕ್ಟೋಬರ್ 9 ರಂದು ರಾತ್ರಿ 11: 30 ಕ್ಕೆ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್ಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮಗಳ ಬಗ್ಗೆ ತನಿಖೆ ನಡೆಸಿದ ನಂತರ ಕರ್ನಾಟಕ ಸರ್ಕಾರ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನಾ ಇಲಾಖೆಯ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.
ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್ ಭಾವುಕ ಪೋಸ್ಟ್ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ
ಹೈದರಾಬಾದ್ ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಹೈದರಾಬಾದ್ನ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ.
ಕೈಗಾರಿಕಾ ದಿಗ್ಗಜ ರತನ್ ಟಾಟಾ ಅವರ ಧ್ವನಿ ಶಾಶ್ವತವಾಗಿ ಮೌನಕ್ಕೆ ಜಾರಿದೆ. ಅವರ ನಿಧನವು ಇಡೀ ಜಗತ್ತಿಗೆ ತೀವ್ರ ದುಃಖ ತಂದಿದೆ. ರತನ್ ಟಾಟಾ ಅವರು ತಮ್ಮ ಜೀವನದ ಕೊನೆಯ ದಿನಗಳಲ್ಲಿಯೂ ಸಕ್ರಿಯರಾಗಿದ್ದರು
ಮುಂಬೈ: ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್ ಚೇರ್ಮನ್ ಆಗಿರೋ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 86 ವರ್ಷದ ಹಿರಿಯ ಜೀವಿಗಳಾದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಎಂದಿನಂತೆಯೇ ಜನರಲ್ ಚೆಕಪ್ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಬುಧವಾರ ಹಳಿಗಳ ಮೇಲೆ ಇರಿಸಲಾಗಿದ್ದ ಸಿಮೆಂಟ್ ಸ್ಲ್ಯಾಬ್ಗಳಿಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ಪ್ರಧಾನ ಮಂತ್ರಿ ಮೋದಿ ಸರ್ಕಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಹಿಂದೂಸ್ತಾನಿ ಸಂಗೀತದ ಮೇರು ಗಾಯಕಿ ಡಾ.ಪ್ರಭಾ ಅತ್ರೆ (92) ಅವರು ಪುಣೆಯಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು.ಪ್ರಭಾ ಅವರು ಶನಿವಾರ ನಸುಕಿನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.
ಮಲಯಾಳಂನ ಹಿರಿಯ ನಟ ಟಿ.ಪಿ.ಮಾಧವನ್ (88) ಬುಧವಾರ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಜಠರಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಧವನ್
ವೈದ್ಯ ವಿದ್ಯಾರ್ಥಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಪ್ರಮುಖ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ.ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್
ಆಸ್ಪತ್ರೆಯ ಡೆಪ್ಯುಟಿ ಸಿಎಂಓ ಸೇವಿಸುವ ಆಹಾರಕ್ಕೆ ಟಿಬಿ ಪೇಶೆಂಟ್ ನ ಕಫವನ್ನ ಮಿಶ್ರಣ ಮಾಡಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪಾತ್ ಹಾಸ್ಪಿಟಲ್ ನಲ್ಲಿ ನಡೆದಿದೆ
ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ.
ನಕಲಿ ಟೊಮೇಟೊ ಸಾಸ್ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ನಕಲಿ ಸಾಸ್ ಗಳನ್ನು ವಶಪಡಿಸಿಕೊಂಡಿರುವ ಘಟನೆ ಸಹರನ್ ಪುರ ಜಿಲ್ಲೆಯಲ್ಲಿ ನಡೆದಿದೆ.
ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್ ಹಿಡಿದವರು, ಪಂಚತಾರಾ ಹೋಟೆಲ್ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್ಗೆ ‘ನೋ ಎಂಟ್ರಿ’ ಬೋರ್ಡ್ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ […]
ಅನಂತನಾಗ್ ಪ್ರದೇಶದಲ್ಲಿ ಉಗ್ರರು ಇಬ್ಬರು ಯೋಧರನ್ನು ಅಪಹರಿಸಿದ್ದಾರೆ. ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯು ಹರಿಯಾಣದಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.