Showing 20 of 2478 posts • Page 47 of 124
ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ.
ನವದೆಹಲಿ : ಭಾರತದ ಘನತೆಯ ಬಗ್ಗೆ ಅಪಪ್ರಚಾರ ಮಾಡಲು ಹಲವರು ದೊಡ್ಡ ಷಡ್ಯಂತ್ರ ನಡೆಸುತ್ತಿರುವುದಕ್ಕೆ ತಕ್ಕ ಉತ್ತರವೆಂಬಂತೆ ಇಂದು ಬಿಜೆಪಿಗೆ ಐತಿಹಾಸಿಕ ಗೆಲುವು ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಇಂಡಿಯಾ ಮಿತ್ರಕೂಟ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿ ಗೆಲುವು ಸಾಧಿಸಿದ ನಿಮಿತ್ತ, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಪ್ರಧಾನಿ ಶುಭಾಶಯ ಕೋರಿ ಮಾತನಾಡಿದರು. ಕಾಂಗ್ರೆಸ್ನ ಪರಿವಾರವು ದೇಶದ ದೊಡ್ಡ […]
ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಾರೆ.
ನವದೆಹಲಿ: ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷವು ತಿಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನದವರೆಗೆ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರುಗಳಿಗೆ ಅವರು ಉತ್ತರಿಸಿದ್ದಾರೆ. ಅವರ ಉತ್ತರಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಹರಿಯಾಣದ ಕನಿಷ್ಠ ಮೂರು ಜಿಲ್ಲೆಗಳಲ್ಲಿ ವಿದ್ಯುನ್ಮಾನ […]
ಮಹಿಳಾ ಡಾಕ್ಟರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ಆಮರಣಾಂತ ಉಪವಾಸ ಕೈಗೊಂಡಿರುವ ಕಿರಿಯ ವೈದ್ಯರಿಗೆ ಬೆಂಬಲ ವ್ಯಕ್ತಪಡಿಸಿ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ
ಬಿಗ್ ಬಾಸ್ ತಮಿಳು-8 ಆರಂಭವಾಗಿದೆ. ವಿಜಯ್ ಸೇತುಪತಿ ಅವರು ಹೊಸ ಬಿಗ್ ಬಾಸ್ ಹೋಸ್ಟ್ ಆಗಿ ಕಾಣಿಸಿಕೊಂಡಿರುವ ತಮಿಳು ಬಿಗ್ ಬಾಸ್ನಲ್ಲಿ ಈ ಬಾರಿ ಸಾಕಷ್ಟು ಟ್ವಿಸ್ಟ್ ಗಳನ್ನು ನೀಡಲಾಗಿದೆ.
ಹರ್ಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿನ ಇತ್ತೀಚಿನ ಟ್ರೆಂಡ್ಗಳ ಪ್ರಕಾರ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಬಿಜೆಪಿ ಮೊದಲ ಜಯಗಳಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ದರ್ಶನ್ಕುಮಾರ್ ಗೆಲುವು ಸಾಧಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. ಶ್ರೇಷ್ಠತೆ ಮತ್ತು ವಿಶ್ವಾಸದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಈ ಪಾಲುದಾರಿಕೆಯು
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ
ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಬಿಹಾರದಲ್ಲಿ ಜಲಪ್ರವಾಹ ಉಂಟಾಗಿದೆ. ರಕ್ಷಣಾ ಸಿಬ್ಬಂದಿ ಜನರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ. ಇನ್ನು, ಹವಾಮಾನ ವೈಪರೀತ್ಯದಿಂದಾಗಿ ರಕ್ಷಣಾ ತಂಡ ಸಂಕಷ್ಟಗಳನ್ನು ಎದುರಿಸುತ್ತಿವೆ.
ಬಹು ನಿರೀಕ್ಷಿತ ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್ಡೌನ್ ಶುರುವಾಗಿದೆ.
ಜನವರಿಯಿಂದ ಛತ್ತೀಸ್ಗಢದಲ್ಲಿ 194 ನಕ್ಸಲರ ಹತ್ಯೆ ಮಾಡಲಾಗಿದೆ. 801 ಮಂದಿಯನ್ನು ಬಂಧಿಸಲಾಗಿದೆ ಮತ್ತು 742 ಮಂದಿ ಶರಣಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.
ನಕಲಿ ಷೇರು ಮಾರುಕಟ್ಟೆ ವೆಬ್ಸೈಟ್ ಮಾಡಿಕೊಂಡು ಜನರಿಗೆ ವಂಚಿಸುತ್ತಿದ್ದ 8 ಸೈಬರ್ ವಂಚಕರನ್ನು ರಾಜಸ್ಥಾನ ಮತ್ತು ಗುಜರಾತ್ನ ವಿವಿಧ ಸ್ಥಳಗಳಿಂದ ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ರತನ್ ಟಾಟಾ (86) ಅವರನ್ನು ಸೋಮವಾರ ಮುಂಜಾನೆ 12.30 ರಿಂದ 1 ಗಂಟೆಯ ನಡುವೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ 2 ದಶಕಗಳ ಬಳಿಕ ನಡೆದ ಅತೀ ದೊಡ್ಡ ಏರ್ ಶೋನಲ್ಲಿ ಭಾರೀ ಅವಘಡ ಸಂಭವಿಸಿದೆ. 15 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಚೆನ್ನೈನಲ್ಲಿ ದುರಂತವೇ ನಡೆದಿದೆ.
ಮೇಘಾಲಯದ ದಕ್ಷಿಣ ಗಾರೋ ಪರ್ವತ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿದೆ.
ಭಾರತ ಹಾಗೂ ಮಾಲ್ಡೀವ್ಸ್ ದ್ವಿಪಕ್ಷೀಯ ಮೊದಲ ಮಾತುಕತೆ ಹಿನ್ನೆಲೆಯಲ್ಲಿ ಇಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತಕ್ಕೆ ಇಂದು ಆಗಮಿಸಿದರು.
ಮಹಿಳೆಯ ಹೊಟ್ಟೆಯಲ್ಲಿ ಬರೋಬ್ಬರಿ 2ಕೆಜಿ ಕೂದಲಿನ ಉಂಡೆ ಪತ್ತೆಯಾಗಿದ್ದು ವೈದ್ಯರೇ ಬೆಚ್ಚಿಬಿದ್ದಿದ್ದಾರೆ.