Showing 20 of 2478 posts • Page 6 of 124
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಜಗದೀಶ್ ಅಫ್ಲೆ ಅವರನ್ನು ನೇಮಕ ಮಾಡಿದೆ.
ಯುವಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಫೇಸ್ಬುಕ್ ಪೋಸ್ಟ್ ಅನ್ನು ಮೆಟಾ (Meta) ಸಂಸ್ಥೆಯು ತೆಗೆದುಹಾಕಿದ ನಂತರ, ಆ ಕಂಪನಿಯ ಸಾರ್ವಜನಿಕ ನೀತಿ ವಿಭಾಗದ ಜಾಗತಿಕ ಮುಖ್ಯಸ್ಥರಿಗೆ ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್ಬುಕ್ ಖಾತೆಯಿಂದ ವಿಡಿಯೊವೊಂದವನ್ನು ತೆಗೆದುಹಾಕಿದ್ದಕ್ಕೆ ಮೆಟಾ ಸಂಸ್ಥೆಯು, ಕೇಂದ್ರ ಸರ್ಕಾರದ ಕ್ಷಮೆಯಾಚಿಸಿದೆ. ಇದು ತಾಂತ್ರಿಕ ದೋಷದಿಂದ ನಡೆದ ಪ್ರಮಾದ ಎಂದೂ ಕಂಪನಿ ಸ್ಪಷ್ಟಪಡಿಸಿದೆ.
ಅಮರನಾಥ ಯಾತ್ರಿಕರಿದ್ದ ಬಸ್ವೊಂದು ತಿರುವಿನಲ್ಲಿ ಅಪಘಾತಕ್ಕೀಡಾಗಿ 39 ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಕಂಗನ್ ಪ್ರದೇಶದಲ್ಲಿ ನಡೆದಿದೆ.
ಚಲಿಸುವ ಎಸಿ ರೈಲು ಬೋಗಿಯೊಳಗೆ ವ್ಯಕ್ತಿಯೊಬ್ಬ ದೀಪ ಹಚ್ಚಿ, ಧೂಪದ ಕಡ್ಡಿ ಬೆಳಗಿ ಪೂಜೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ.
ವೇಗವಾಗಿ ಬಂದ ಟ್ರಕ್ ಒಂದು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ, ಫ್ಲೈಓವರ್ನ ತಡೆಗೋಡೆಯನ್ನು ಧ್ವಂಸಗೊಳಿಸಿ ಕೆಳಗಿನ ರಸ್ತೆಗೆ ಬಿದ್ದಿದೆ.
ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದ ಪ್ರಮುಖ ಬೇಡಿಕೆ ಈಡೇರಿದರೂ, ಹೋರಾಟ ಇನ್ನೂ ಮುಗಿದಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ ಸ್ಪಷ್ಟಪಡಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಅಮ್ರೋಹಾದ ಮೂವರು ಸಹೋದರಿಯರು, ಛಾಯಾಗ್ರಾಹಕ ಮತ್ತು ಕ್ಯಾಮೆರಾಮನ್ ವಿಕಾಸ್ ಅಲಿಯಾಸ್ ವಿಕ್ಕು ಎಂಬ ಒಂದೇ ವ್ಯಕ್ತಿಯನ್ನು ದೇವಾಲಯದ ಸಮಾರಂಭದಲ್ಲಿ ವಿವಾಹವಾಗಿರುವುದು ದೇಶಾದ್ಯಂತ ಗಮನ ಸೆಳೆದಿದ್ದಾರೆ.
ಅಸ್ಸಾಂನಲ್ಲಿ ನೆರೆ ಹಾವಳಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ವೇಳೆ ಹಿಂಸಾಚಾರ, ಗಲಭೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿರುವ ವ್ಯಕ್ತಿಗಳ ಪಾಸ್ಪೋರ್ಟ್ಗಳನ್ನು ರದ್ದುಗೊಳಿಸಲು ದೆಹಲಿ ಪೊಲೀಸರು ಪ್ರಕ್ರಿಯೆ ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
026 ರ ನೀಟ್ -ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಸಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತರಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ.
ನೀಟ್ ಯುಜಿ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ಜುಲೈ 24ರಂದು ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಇದೀಗ ಕರೆ ನೀಡಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ .
ಚೆನ್ನೈ: ನೀಟ್ ಪ್ರಶ್ನೆ ಪರೀಕ್ಷೆ ಸೋರಿಕೆ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.
ಅಸ್ಸಾಂನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ.
ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ನೀಟ್ ಪ್ರತಿಭಟನೆಯ ವೇಳೆ ನಡೆದ ಘಟನೆಗಳಿಗೆ ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಕಾರಣರಾಗಿದ್ದಾರೆ.
ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಸರ್ಕಾರ ಸ್ಪಂದಿಸಲು ಪ್ರಾರಂಭಿಸುತ್ತಿರುವ ಇತ್ತೀಚಿನ ಸಂಕೇತವಾಗಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವು ಪ್ರತಿಭಟನಾ ನಿರತ ಯುವಜನರ ಕಳವಳಗಳನ್ನು ಮತ್ತು ಪರೀಕ್ಷಾ ಸುಧಾರಣೆಗಳನ್ನು ಪರಿಹರಿಸಲು ಬದ್ಧವಾಗಿದೆ ಎಂದು ಭಾರತದ ಶಿಕ್ಷಣ ಸಚಿವರು ಹೇಳಿದ್ದಾರೆ.