Showing 20 of 2479 posts • Page 60 of 124
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಿರಿಯ ವೈದ್ಯರ ಮುಷ್ಕರದ ಸಂದರ್ಭದಲ್ಲಿ ಚಿಕಿತ್ಸೆ ಕೊರತೆಯಿಂದ ಸಾವನ್ನಪ್ಪಿದ 29 ಜನರ ಕುಟುಂಬಗಳಿಗೆ ರಾಜ್ಯ ಸರ್ಕಾರ 2 ಲಕ್ಷ ಪರಿಹಾರವನ್ನು ನೀಡಲಿದೆ ಎಂದು ಘೋಷಿಸಿದರು.
ಬೆಂಗಳೂರಿಗೆ ತೆರಳುತ್ತಿದ್ದ ಎಪಿಎಸ್ಆರ್ಟಿಸಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋದಿ ಸರ್ಕಾರ ಈಗ ಅಂಡಮಾನ್ ನಿಕೋಬಾರ್ ರಾಜಧಾನಿಯಾಗಿರುವ ಪೋರ್ಟ್ಬ್ಲೇರ್ ಹೆಸರನ್ನು ಕೂಡ ಮರುನಾಮಕರಣ ಮಾಡುತ್ತಿದೆ. ಅಮಿತ್ ಶಾ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಮೂವರು ಐಎಎಸ್ ಆಕಾಂಕ್ಷಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಓಲ್ಡ್ ರಾಜಿಂದರ್ ನಗರದ ಕೋಚಿಂಗ್ ಸೆಂಟರ್ ಬೇಸ್ಮೆಂಟ್ನ ನಾಲ್ವರು ಸಹ ಮಾಲೀಕರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.
ರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಆಗ್ರಾ ನಗರವನ್ನು ʻವಿಶ್ವ ಪರಂಪರೆಯ ತಾಣʼ ಎಂದು ಘೋಷಿಸಲು ನಿರ್ದೆಶನ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸೆರೆವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಜಾಮೀನು ಮಂಜೂರು ಮಾಡಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಆಧಾರ್ ಕಾರ್ಡ್ ನವೀಕರಿಸದವರು ಸರಿಯಾದ ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳ ಮೂಲಕ ತಮ್ಮ ಮಾಹಿತಿಯನ್ನು ದೃಢೀಕರಿಸಬೇಕು.ಈಗ ಉಚಿತ ಸೌಲಭ್ಯವು ಸೆಪ್ಟೆಂಬರ್ 14 ನಾಳೆಗೆ ಕೊನೆಗೊಳ್ಳಲಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಬಂಧನವನ್ನು ಪ್ರಶ್ನಿಸಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ನೀಡಲಿದೆ.
2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿ 2025ರ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇ 1ರಿಂದಲೇ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 15ರವರೆಗೆ ನಾಮನಿರ್ದೇಶನಕ್ಕೆ ಅವಕಾಶ ಇರುತ್ತದೆ
ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಖಾಸಗಿ ಅಂಗವನ್ನು ಮಹಿಳಾ ಉದ್ಯೋಗಿಯೊಬ್ಬರು ಬ್ಲೇಡ್ ನಿಂದ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಕಳೆದ ಜುಲೈನಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಶೃತಿ ಗೆ ಈಗ ಮತ್ತೊಂದು ಬರಸಿಡಿಲು ಬಡಿದಿದೆ.
ಹಿರಿಯ ಕಮ್ಯುನಿಸ್ಟ್ ಪಾರ್ಟಿ ನಾಯಕ ಸೀತಾರಾಂ ಯೆಚೂರಿ ಅವರ ಮೃತದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಗೆ ದಾನ ಮಾಡಿದ್ದಾರೆ.
ಆರ್ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯವನ್ನು ಖಚಿತಪಡಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಪಶ್ಚಿಮ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ
ಹಿರಿಯ ಎಡ ಪಂಥೀಯ ನಾಯಕ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವರ್ಷವಾಗಿತ್ತು.
ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಗೂಗಲ್ ಈಗಾಗಲೆ ಹಲವಾರು ವೇದಿಕೆಗಳನ್ನು ತನ್ನ ಬಳಕೆದಾದರಿಗೆ ಒದಗಿಸಿಕೊಟ್ಟಿದೆ. ಅದರಲ್ಲೂ ವಿಶ್ವದಲ್ಲಿ ಅತೀ ಹೆಚ್ಚು ಇಮೇಲ್ ಪ್ಲಾಟ್ಫಾರ್ಮ್ ಆಗಿ ಜನ ಜಿಮೇಲ್ ಬಳಸುತ್ತಿದ್ದಾರೆ. ಬರೋಬ್ಬರಿ 1.5 ಬಿಲಿಯನ್
ಕಳೆದ ಆಗಸ್ಟ್ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.
ಲವತ್ತು ವರ್ಷದ ಆಸುಪಾಸಿನವರಿಗೆ ಸಮೀಪ ದೃಷ್ಟಿದೋಷ ಉಂಟಾಗಿ ಓದಲು ತೊಂದರೆಯಾದಾಗ ಅದಕ್ಕೆ ಕನ್ನಡಕದ ಬದಲು ಬಳಸಬಹುದು ಎನ್ನಲಾಗಿದ್ದ ಐ ಡ್ರಾಪ್ಸ್ಗೆ ಕೇಂದ್ರ ಸರ್ಕಾರ ಪರವಾನಗಿಯನ್ನು